Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:13 - ಕನ್ನಡ ಸತ್ಯವೇದವು J.V. (BSI)

13 ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಯೆಫುನ್ನೆಯ ಮಗ ಕಾಲೇಬನಿಗೆ ಯೆಹೂದ ಕುಲದವರ ನಡುವೆ ಅನಾಕನ ತಂದೆ ಆದ ಅರ್ಬನ ನಗರವಾಗಿದ್ದ ಹೆಬ್ರೋನನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಸ್ವಾಸ್ತ್ಯದಲ್ಲಿಯೇ ಸ್ವಲ್ಪ ಪ್ರದೇಶವನ್ನು ಕೊಡಬೇಕೆಂದು ದೇವರು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಕಾಲೇಬನಿಗೆ ದೇವರು ಆಜ್ಞಾಪಿಸಿದ ಪ್ರದೇಶವನ್ನು ಕೊಟ್ಟನು. ಯೆಹೋಶುವನು ಅವನಿಗೆ ಹೆಬ್ರೋನ್ ಎಂಬ ಕಿರ್ಯಾತರ್ಬ ಊರನ್ನು ಕೊಟ್ಟನು. (ಅರ್ಬನು ಅನಾಕನ ತಂದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರ ಯೆಫುನ್ನೆಯ ಮಗ ಕಾಲೇಬನಿಗೆ ಅನಾಕನ ತಂದೆಯ ಕಿರ್ಯತ್ ಅರ್ಬ ಎಂಬ ಹೆಬ್ರೋನನ್ನು ಯೆಹೂದನ ಮಕ್ಕಳ ನಡುವೆ ಸೊತ್ತಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:13
18 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಮೋಶೆಗೆ ವಿರೋಧವಾಗಿ ಗುಣುಗುಟ್ಟಲಾಗಿ ಕಾಲೇಬನು ಅವರನ್ನು ಸುಮ್ಮನಿರಿಸಿ - ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ; ಅದನ್ನು ಜಯಿಸಬಲ್ಲೆವು ಎಂದು ಹೇಳಿದನು.


ಇಷ್ಟು ವರುಷ ಬದುಕಿದ ಮೇಲೆ ಆಕೆ ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಯ ನಿವಿುತ್ತ ಗೋಳಾಡಿ ಕಣ್ಣೀರು ಸುರಿಸಿದನು.


ಯೆಹೂದ ಕುಲದ ಯೆಫುನ್ನೆಯ ಮಗನಾದ ಕಾಲೇಬ್,


ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯತರ್ಬವಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ.)


ಅವರು ಮುಂಚೆ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬವರನ್ನು ಹೊಡೆದು ಬಿಟ್ಟರು.


ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹುಬುದ್ಧಿವಂತೆಯೂ ಸುಂದರಿಯೂ ಆಗಿದ್ದಳು; ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಠುರನೂ ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಧನವಂತನು. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.


ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣಪ್ರಾಂತವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು ಎಂದು ಉತ್ತರಕೊಟ್ಟನು.


ಆದರೆ ಅದರ ಹೊಲಗಳನ್ನೂ ಅದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.


ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರಹಾಕಿಸಿಕೊಳ್ಳುತ್ತಾ ಹೆಬ್ರೋನಿನಲ್ಲಿರುವ ಮಮ್ರೆ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.


ಅದೇ ಕಾಲದಲ್ಲಿ ಯೆಹೋಶುವನು ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಮತ್ತು ಇಸ್ರಾಯೇಲ್ ಪ್ರಾಂತಗಳ ಬೆಟ್ಟಗಳಲ್ಲಿಯೂ ಇದ್ದ ಉನ್ನತಪುರುಷರನ್ನು ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.


ಇಸ್ರಾಯೇಲ್ಯರು ನಫ್ತಾಲಿಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತದಲ್ಲಿ ಕೆದೆಷ್, ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಶೆಕೆಮ್, ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬೀ ಪಟ್ಟಣಗಳನ್ನು ನೇವಿುಸಿದರು.


ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು; ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಅಟ್ಟಿಬಿಟ್ಟನು.


ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು ಇವರೇ.


ಅನಂತರ ದಾವೀದನು ಯೆಹೋವನನ್ನು - ನಾನು ಯೆಹೂದದೇಶದ ಯಾವದಾದರೊಂದು ಪಟ್ಟಣಕ್ಕೆ ಹೋಗಬಹುದೋ ಎಂದು ಕೇಳಲು ಆತನು - ಹೋಗಬಹುದು ಅಂದನು. ಅವನು ತಿರಿಗಿ - ಯಾವ ಊರಿಗೆ ಹೋಗಲಿ ಎಂದು ಕೇಳಿದ್ದಕ್ಕೆ - ಹೆಬ್ರೋನಿಗೆ ಹೋಗು ಎಂಬ ಉತ್ತರ ಸಿಕ್ಕಿತು.


ಅಜೇಕ, ಚೊರ್ಗ, ಅಯ್ಯಾಲೋನ್, ಹೆಬ್ರೋನ್ ಇವೇ. ಕೋಟೆಕೊತ್ತಲುಗಳುಳ್ಳ ಈ ಪಟ್ಟಣಗಳು ಯೆಹೂದ ಬೆನ್ಯಾಮೀನ್ ಪ್ರಾಂತದವುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು