Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:47 - ಕನ್ನಡ ಸತ್ಯವೇದವು J.V. (BSI)

47 ಅಷ್ಡೋದ್ ಸಂಸ್ಥಾನವೂ ಅದರ ಗ್ರಾಮನಗರಗಳೂ; ಗಾಜಾ ಸಂಸ್ಥಾನವೂ ಐಗುಪ್ತಹಳ್ಳದ ಉತ್ತರದಲ್ಲಿ ಮತ್ತು ಮಹಾಸಾಗರತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ ನಗರಗಳೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಮತ್ತು ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ ಪಟ್ಟಣಗಳು; ಗಾಜಾ ಸಂಸ್ಥಾನ ಹಾಗೂ ಐಗುಪ್ತ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ, ಪಟ್ಟಣಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ-ನಗರಗಳು; ಗಾಜಾ ಸಂಸ್ಥಾನ ಹಾಗೂ ಈಜಿಪ್ಟಿನ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲ ಗ್ರಾಮ, ನಗರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಅಷ್ಡೋದಿನ ಸುತ್ತಮುತ್ತಲಿನ ಎಲ್ಲ ಕ್ಷೇತ್ರ ಮತ್ತು ಅಲ್ಲಿಯ ಸಣ್ಣ ಊರುಗಳು ಯೆಹೂದ ಪ್ರದೇಶದ ಭಾಗವಾಗಿದ್ದವು. ಯೆಹೂದದ ಜನರು ಗಾಜಾದ ಸುತ್ತಮುತ್ತಲಿನ ಕ್ಷೇತ್ರ ಮತ್ತು ಹತ್ತಿರದ ಊರುಕೇರಿಗಳನ್ನೂ ಹೊಲಗದ್ದೆಗಳನ್ನೂ ಪಡೆದುಕೊಂಡರು. ಅವರ ನೆಲವು ಈಜಿಪ್ಟಿನ ನದಿಯವರೆಗೂ ವಿಸ್ತರಿಸಿತ್ತು; ಮೆಡಿಟರೆನಿಯನ್ ಸಮುದ್ರದ ತೀರದುದ್ದಕ್ಕೂ ಚಾಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಅಷ್ಡೋದ್ ಪಟ್ಟಣ ಮತ್ತು ಅದರ ಸುತ್ತಲಿನ ಪಟ್ಟಣಗಳೂ ಗ್ರಾಮಗಳೂ, ಗಾಜಾ, ಅದರ ಪಟ್ಟಣಗಳು, ಅದರ ಗ್ರಾಮಗಳು. ಈಜಿಪ್ಟಿನ ಕಲ್ಲಿನ ನಾಲೆ, ಮೆಡಿಟೆರಿಯನ್ ಸಮುದ್ರ, ಅದರ ಮೇರೆ ಇವುಗಳವರೆಗೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:47
17 ತಿಳಿವುಗಳ ಹೋಲಿಕೆ  

ಅಚ್ಮೋನಿನ ಮೇಲೆ ಐಗುಪ್ತದ ಹಳ್ಳಕ್ಕೆ ಬಂದು ಸಮುದ್ರತೀರದಲ್ಲಿ ಮುಗಿಯುವದು. ಇದು ಅದರ ತೆಂಕಣ ಮೇರೆ.


ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ - ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇವಿುನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.


ಗಾಜ ನಿರ್ಜನವಾಗುವದು, ಅಷ್ಕೆಲೋನ್ ಹಾಳಾಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಓಡಿಸಿಬಿಡುವರು, ಎಕ್ರೋನ್ ನಿರ್ಮೂಲವಾಗುವದು.


ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶನಹೊಂದಿದೆ ಫಿಲಿಷ್ಟಿಯದ ಬೈಲುಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿ?


ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.


ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗೆ ನೇವಿುಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.


ಎಕ್ರೋನಿನಿಂದ ಸಮುದ್ರದವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತಗ್ರಾಮಗಳು;


ಬೆಟ್ಟದ ಮೇಲಿನ ಪ್ರದೇಶದಲ್ಲಿರುವ ಶಾಮೀರ್, ಯತ್ತೀರ್, ಸೋಕೋ,


ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ಎದುರಿನಿಂದ ಹೊರಡಿಸಿದನು; ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು.)


ಇಸ್ರಾಯೇಲ್ಯರ ಪ್ರಾಂತ್ಯದಲ್ಲಿ ಅಂಥವರು ಯಾರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.


ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ನನಗೆ ದೂರವಾಗಿದೆ.


ಗಾಜಪ್ರಾಂತದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ ಕಾವಲುಗಾರರ ಬುರುಜಿರುವ ಚಿಕ್ಕ ಹಳ್ಳಿ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ಹಾಳುಮಾಡಿದನು.


ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು