Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 16:5 - ಕನ್ನಡ ಸತ್ಯವೇದವು J.V. (BSI)

5 ಎಫ್ರಾಯೀಮ್ ಗೋತ್ರಗಳ ದೇಶದ [ದಕ್ಷಿಣ ದಿಕ್ಕಿನ] ಮೇರೆಯು ಅಟಾರೋತದ್ದಾರಿನ ಪೂರ್ವದಿಕ್ಕಿನಿಂದ ತೊಡಗಿ ಮೇಲಿನ ಬೇತ್‍ಹೋರೋನಿನ ಮೇಲೆ ಸಮುದ್ರತೀರಕ್ಕೆ ಹೋಗಿ ಅಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಎಫ್ರಾಯೀಮ್ ಗೋತ್ರಗಳ ದೇಶದ ದಕ್ಷಿಣ ದಿಕ್ಕಿನ ಮೇರೆಯು ಅಟಾರೋತದ್ದಾರಿನ ಪೂರ್ವ ದಿಕ್ಕಿನಿಂದ ಬೇತ್ ಹೋರೋನಿನ ಮೇಲೆ ಸಮುದ್ರತೀರಕ್ಕೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಎಫ್ರಯಿಮ್ ಗೋತ್ರಗಳ ನಾಡಿನ ದಕ್ಷಿಣ ದಿಕ್ಕಿನ ಎಲ್ಲೆ ಆಟಾರೋತದ್ದಾರಿನ ಪೂರ್ವ ದಿಕ್ಕಿನಿಂದ ತೊಡಗಿ ಮೇಲಿನ ಬೇತ್ ಹೋರೋನಿನ ಮೇಲೆ ಸಮುದ್ರ ತೀರಕ್ಕೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ. ಅದರ ಉತ್ತರ ದಿಕ್ಕಿನ ಎಲ್ಲೆ ಮಿಕ್ಮೆತಾತ್ ಎಂಬಲ್ಲಿ ತೊಡಗಿ ಪೂರ್ವಕ್ಕೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಎಫ್ರಾಯೀಮ್ ಕುಲದವರಿಗೆ ಕೊಟ್ಟ ಸ್ವಾಸ್ತ್ಯವು ಇಂತಿದೆ: ಅವರ ಸ್ವಾಸ್ತ್ಯದ ಪೂರ್ವದಿಕ್ಕಿನ ಸೀಮೆಯು ಮೇಲಿನ ಬೇತ್‌ಹೋರೋನಿನ ಹತ್ತಿರ ಇದ್ದ ಅಟಾರೋತದ್ದಾರಿನಿಂದ ಆರಂಭವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರ ಕುಟುಂಬಗಳ ಪ್ರಕಾರ ಎಫ್ರಾಯೀಮ್ ಗೋತ್ರದ ಪ್ರದೇಶ ಹೀಗಿತ್ತು: ಪೂರ್ವದಿಕ್ಕಿನ ಅಟಾರೋತ್ ಅದ್ದಾರಿನಿಂದ ಪ್ರಾರಂಭಿಸಿ, ಮೇಲಿನ ಬೇತ್ ಹೋರೋನಿನವರೆಗೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 16:5
7 ತಿಳಿವುಗಳ ಹೋಲಿಕೆ  

ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಅನ್ನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗಿ ಅಲ್ಲಿಂದ ಇಳಿದು ಅಟಾರೋತದ್ದಾರಿನ ಮೇಲೆ ಕೆಳಗಿನ ಬೇತ್‍ಹೋರೋನಿನ ಬಳಿಯಲ್ಲಿರುವ ಬೆಟ್ಟಕ್ಕೆ ಹೋಗುತ್ತದೆ.


ಬೇತೇಲ್ ಇವುಗಳ ಮೇಲೆ ಲೂಜಿಗೆ ಹೋಗುತ್ತದೆ. ಅಲ್ಲಿಂದ ಅರ್ಕೀಯರ ಮೇರೆಯನ್ನು ಅನುಸರಿಸಿ ಅಟಾರೋತಿಗೆ ಹೋಗುತ್ತದೆ.


ಯೆಹೋವನು ಇಸ್ರಾಯೇಲ್ಯರ ಮುಂದೆ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಪೂರ್ಣವಾಗಿ ಸೋಲಿಸಿ ಬೇತ್‍ಹೋರೋನ್ ಎಂಬ ಗಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.


ಶೇರ ಎಂಬವಳು ಅವನ ಮಗಳು; ಈಕೆಯು ಮೇಲಣ ಮತ್ತು ಕೆಳಗಣ ಬೇತ್‍ಹೋರೋನ್ ಎಂಬ ಪಟ್ಟಣಗಳನ್ನೂ ಉಜ್ಜೇನ್‍ಶೇರ ಎಂಬ ಪಟ್ಟಣವನ್ನೂ ಕಟ್ಟಿಸಿದಳು.


ಮನಸ್ಸೆಯ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಎಫ್ರಾಯೀವಿುಗೆ ಒಂದು ಪಾಲು.


ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ್, ಎಫ್ರಾಯೀಮ್, ಬೆನ್ಯಾಮೀನ್ ಇವುಗಳ ಜನರ ಮೇಲೆಯೂ ಬೇರೆ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಅರಸನನ್ನಾಗಿ ಮಾಡಿದನು.


ಅವರು ವಾಸಿಸುವ ಸ್ವಾಸ್ತ್ಯದ ಮೇರೆಗಳು - [ದಕ್ಷಿಣ ದಿಕ್ಕಿನಲ್ಲಿ] ಬೇತೇಲ್ ಪಟ್ಟಣವೂ ಅದರ ಗ್ರಾಮಗಳೂ ; ಪೂರ್ವದಿಕ್ಕಿನಲ್ಲಿ ನಾರಾನ್; ಪಶ್ಚಿಮ ದಿಕ್ಕಿನಲ್ಲಿ ಗೆಜೆರ್ ಪಟ್ಟಣವೂ ಅದರ ಗ್ರಾಮಗಳೂ; [ಉತ್ತರ ದಿಕ್ಕಿನಲ್ಲಿ] ಶೆಕೆಮ್ ಅಯ್ಯಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಇವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು