Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:18 - ಕನ್ನಡ ಸತ್ಯವೇದವು J.V. (BSI)

18 ಆ ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದು ಹಾಕಬಹುದು. ಅದಕ್ಕೆ ಸೇರಿರುವ ಬೈಲೂ ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರಡಿಸುವಿರಿ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದುಹಾಕಬಹುದು. ಅದಕ್ಕೆ ಸೇರಿರುವ ಬಯಲು ಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರದೂಡುವಿರಿ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಮೇಲೆ ನಾಡನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದು ಹಾಕಬಹುದು. ಅದಕ್ಕೆ ಸೇರಿರುವ ಬಯಲುಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರು ಹಾಗೂ ಕಬ್ಬಿಣದ ರಥಗಳುಳ್ಳವರು. ಆದರೂ ನೀವು ಅವರನ್ನು ಹೊರದೂಡಬಲ್ಲಿರಿ,” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ಬೆಟ್ಟಪ್ರದೇಶವನ್ನು ತೆಗೆದುಕೊಳ್ಳಿರಿ. ಅದೊಂದು ಕಾಡು. ಆದರೆ ನೀವು ಆ ಮರಗಳನ್ನು ಕಡಿದುಹಾಕಿ ಅದನ್ನು ವಾಸಿಸಲು ಒಳ್ಳೆಯ ಸ್ಥಳವನ್ನಾಗಿ ಮಾಡಿಕೊಳ್ಳಬಹುದು. ನೀವು ಆ ಪ್ರದೇಶವನ್ನೆಲ್ಲಾ ನಿಮ್ಮ ಸ್ವತ್ತನ್ನಾಗಿ ಮಾಡಿಕೊಳ್ಳಿರಿ. ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಕಾನಾನ್ಯರನ್ನು ಒತ್ತಾಯಿಸಿರಿ. ಅವರು ಶಕ್ತಿಯುತರಾಗಿದ್ದರೂ ಅವರ ಬಳಿ ಬಲವಾದ ಆಯುಧಗಳಿದ್ದರೂ ನೀವು ಅವರನ್ನು ಸೋಲಿಸುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಏಕೆಂದರೆ ಅದು ಅಡವಿಯಾಗಿದೆ. ಅದನ್ನು ನೀವು ಕಡಿಯಬೇಕು. ಅದರ ಅಂತ್ಯಗಳವರೆಗೂ ನಿಮ್ಮದಾಗಿರುವುದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿಬಿಡಲು ನಿಮಗೆ ಸಾಧ್ಯ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:18
18 ತಿಳಿವುಗಳ ಹೋಲಿಕೆ  

ಆದದರಿಂದ - ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು? ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು. ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ಸಭಾನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ;


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಈ ಎಲ್ಲಾ ವಿಷಯಗಳಲ್ಲಿ ಪೂರ್ಣ ಜಯಶಾಲಿಗಳಾಗುತ್ತೇವೆ.


ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಫ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ಪಟ್ಟಣಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಅನ್ನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.


ಇಸ್ರಾಯೇಲ್ಯರು ನಫ್ತಾಲಿಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತದಲ್ಲಿ ಕೆದೆಷ್, ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಶೆಕೆಮ್, ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬೀ ಪಟ್ಟಣಗಳನ್ನು ನೇವಿುಸಿದರು.


ಒಟ್ಟಾರೆ ಲೆಬನೋನಿನಿಂದ ವಿುಸ್ರೆಫೋತ್ಮಯಿವಿುನವರೆಗಿರುವ ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳೂ ಇವೇ. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಎದುರಿನಿಂದ ಹೊರಡಿಸಿಬಿಡುವೆನು. ನೀನಾದರೋ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ


ಅವನು ಯೋಸೇಫ್ಯರಾದ ಎಫ್ರಾಯೀಮ್ ಮನಸ್ಸೆ ಕುಲಗಳ ಜನರಿಗೆ - ನೀವು ಮಹಾಜನಾಂಗವೂ ಬಹುಬಲವುಳ್ಳವರೂ ಆಗಿರುವದು ನಿಜ; ನೀವು ಒಂದು ಭಾಗಕ್ಕಿಂತ ಹೆಚ್ಚು ತೆಗೆದುಕೊಳ್ಳಬಹುದಲ್ಲಾ!


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.


ಅನಂತರ ಸೈನಿಕರು ಇಸ್ರಾಯೇಲ್ಯರಿಗೆ ವಿರೋಧವಾಗಿ ಹೊರಟು ಬೈಲಿಗೆ ಬಂದರು; ಎಫ್ರಾಯೀಮ್‍ಕಾಡಿನಲ್ಲಿ ಯುದ್ಧವಾಯಿತು.


ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರವಿುಯ ಭುಜಬಲದಿಂದಲೂ ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನ ಕಡೆಯಿಂದಲೂ ಅವನ ಬಿಲ್ಲು ಸ್ಥಿರವಾಗಿ ನಿಂತಿತು, ಅವನ ಕೈಗಳು ಚುರುಕಾಗಿ ಮಾಡಲ್ಪಟ್ಟವು.


ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು; ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು [ಬಲವುಳ್ಳವು]; ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೋಟ್ಯಾಂತರ ಜನರೂ ಮನಸ್ಸೆಕುಲದ ಲಕ್ಷಾಂತರ ಮಂದಿಯೂ ಇಂಥವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು