Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:28 - ಕನ್ನಡ ಸತ್ಯವೇದವು J.V. (BSI)

28 ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ನಗರಗಳೂ ಅವುಗಳ ಗ್ರಾಮಗಳೂ ಇವೇ. ಬೆನ್ಯಾಮೀನ್ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು ಇವೇ. ಬೆನ್ಯಾಮೀನ ಗೋತ್ರಗಳಿಗೆ ದೊರಕಿದ ಸ್ವತ್ತು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಎಲೆಫ್, ಯೆಬೂಸಿಯರು ಇದ್ದಂಥ ಜೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ನಗರಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಆಸ್ತಿಪಾಸ್ತಿ ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಚೇಲ, ಎಲೆಫ್, ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸಿಯರ ಪಟ್ಟಣ, ಗಿಬೆಯತ್ ಮತ್ತು ಕಿರ್ಯತ್. ಬೆನ್ಯಾಮೀನ್ ಗೋತ್ರಗಳವರು ಈ ಪ್ರದೇಶಗಳನ್ನೆಲ್ಲ ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯ, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳೂ, ಅವುಗಳ ಗ್ರಾಮಗಳೂ ಆಗಿರುತ್ತವೆ. ಇವೇ ಬೆನ್ಯಾಮೀನ್ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆತ ಸೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:28
22 ತಿಳಿವುಗಳ ಹೋಲಿಕೆ  

ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತಿಯಾಯಿತು.


ಅಲ್ಲಿಂದ ಅದು ಯೆರೂಸಲೇಮ್ ಪಟ್ಟಣವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣಮಾರ್ಗವಾಗಿ ಹಿನ್ನೋಮ್ ತಗ್ಗಿನ ಪಶ್ಚಿಮದಲ್ಲಿಯೂ ರೆಫಾಯೀಮ್ ತಗ್ಗಿನ ಉತ್ತರದಲ್ಲಿಯೂ ಇರುವ ಬೆಟ್ಟದ ತುದಿಗೆ ಹೋಗುತ್ತದೆ.


ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದೀ; ಆಹಾ, ನನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಯುದ್ಧವು ಗಿಬ್ಯದಲ್ಲಿ ಅವರಿಗೆ ತಗಲುವದಿಲ್ಲ.


ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ [ಅನ್ನುತ್ತಾರೆ], ರಾಮಾ ನಡುಗುತ್ತದೆ,


ಆ ದಿವಸ ದಾವೀದನು - ಯೆಬೂಸಿಯರನ್ನು ಜಯಿಸಬೇಕೆಂದಿರುವವನು ಜಲದ್ವಾರದಲ್ಲಿ ಹತ್ತಿಹೋಗಿ ದಾವೀದನಿಗೆ ಅಸಹ್ಯರಾಗಿರುವ ಕುರುಡರನ್ನೂ ಕುಂಟರನ್ನೂ ಕಂದಕದಲ್ಲಿ ನಾಶಮಾಡಿಬಿಡಲಿ ಎಂದು ಹೇಳಿದನು. ಆದದರಿಂದ ಕುರುಡರೂ ಕುಂಟರೂ ಇದ್ದಾರೆ, ಒಳಗೆ ಹೋಗಲಾಗದು ಎಂದು ಗಾದೆಯುಂಟು.


ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು.


ನೆಫ್ತೋಹ ಬುಗ್ಗೆಯ ಮೇಲೆ ಬೆನ್‍ಹಿನ್ನೋಮ್ ತಗ್ಗಿನ ಈಚೆಗೂ ರೆಫಾಯಿಮ್ ತಗ್ಗಿನ ಉತ್ತರದಲ್ಲಿಯೂ ಇರುವ ಬೆಟ್ಟದ ಅಂಚಿಗೆ ಹೋಗಿ ಅಲ್ಲಿಂದ ಯೆಬೂಸಿಯರ ಬೆಟ್ಟದ ದಕ್ಷಿಣದಲ್ಲಿದ್ದ ಬೆನ್‍ಹಿನ್ನೋಮ್ ತಗ್ಗಿನ ಮಾರ್ಗವಾಗಿ ಏನ್‍ರೋಗೆಲಿಗೆ ಬರುತ್ತದೆ.


ಯೆರೂಸಲೇವಿುನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸುವದು ಯೆಹೂದಕುಲದವರಿಂದ ಆಗದೆ ಹೋಯಿತು. ಆದದರಿಂದ ಅವರು ಇಂದಿನವರೆಗೂ ಯೆಹೂದಕುಲದವರೊಡನೆ ಯೆರೂಸಲೇವಿುನಲ್ಲೇ ವಾಸವಾಗಿದ್ದಾರೆ.


ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.


ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂವಿುಯನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.


ಬೆನ್ಯಾಮೀನ್ ಕುಲದ ಕುಟುಂಬಗಳು ಯಾವವಂದರೆ - ಬೆಲಗನ ವಂಶಸ್ಥರಾದ ಬೆಲಗ್ಯರು, ಅಷ್ಬೇಲನ ವಂಶಸ್ಥರಾದ ಅಷ್ಬೇಲ್ಯರು, ಅಹೀರಾಮನ ವಂಶಸ್ಥರಾದ ಅಹೀರಾಮ್ಯರು,


ಚೀಟು ಎರಡನೆಯ ಸಾರಿ ಸಿಮೆಯೋನ್ ಕುಲದವರಿಗೆ ಬಿದ್ದಿತು. ಸಿಮೆಯೋನ್ ಕುಲದ ಗೋತ್ರಗಳ ಸ್ವಾಸ್ತ್ಯವು ಯೆಹೂದಕುಲದವರ ಸ್ವಾಸ್ತ್ಯದ ಮಧ್ಯದಲ್ಲಿತ್ತು.


ದಾವೀದನು ತನ್ನ ಜನರನ್ನು ಕರಕೊಂಡು ಯೆರೂಸಲೇವಿುನಲ್ಲಿದ್ದ ದೇಶದ ಮೂಲನಿವಾಸಿಗಳಾದ ಯೆಬೂಸಿಯರಿಗೆ ವಿರೋಧವಾಗಿ ಹೊರಟನು. ಅವರು ಇವನು ಒಳಗೆ ಬರಲಾರನೆಂದು ನೆನಸಿ ದಾವೀದನಿಗೆ - ನೀನು ಒಳಗೆ ಬರಲಾರಿ; ಕುರುಡರು, ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು ಎಂದು ಹೇಳಿದರು.


ನೆಟೋಫದವನಾದ ಬಾಣನ ಮಗ ಹೇಲೆಬ್, ಬೆನ್ಯಾಮೀನ್ ದೇಶದ ಗಿಬೆಯ ಊರಿನ ರೀಬೈ ಎಂಬವನ ಮಗನಾದ ಇತ್ತೈ,


ಬೆನ್ಯಾಮೀನ್ ಕುಲದವರೇ, ಯೆರೂಸಲೇವಿುನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್‍ಹಕ್ಕೆರೆವಿುನಲ್ಲಿ ಧ್ವಜವನ್ನೆತ್ತಿರಿ; ಏಕಂದರೆ ಅತಿನಾಶಕವಾದ ವಿಪತ್ತು ಬಡಗಲಿಂದ ತಲೆದೋರುತ್ತಿದೆ.


ಯೆರೂಸಲೇವಿುನಲ್ಲಿದ್ದ ಯೆಬೂಸಿಯರನ್ನು ಹೊರಡಿಸುವದು ಬೆನ್ಯಾಮೀನ್ಯರಿಂದ ಆಗದೆ ಹೋಯಿತು. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇವಿುನಲ್ಲಿಯೇ ವಾಸವಾಗಿದ್ದಾರೆ.


ಆ ಮನುಷ್ಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ ಉಪಪತ್ನಿಯನ್ನು ಕರೆದುಕೊಂಡು ಹೊರಟನು.


ಇವರು ವಂಶಾವಳಿಯ ಪ್ರಕಾರ ಗೋತ್ರ ಪ್ರಧಾನರೂ ಯೆರೂಸಲೇವಿುನಲ್ಲಿ ವಾಸಿಸುವವರೂ ಆಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು