Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:3 - ಕನ್ನಡ ಸತ್ಯವೇದವು J.V. (BSI)

3 ಅಗ ಯೆಹೋಶುವನು ಇಸ್ರಾಯೇಲ್ಯರಿಗೆ - ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವದರಲ್ಲಿ ಇನ್ನೆಷ್ಟು ತಡಮಾಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವುದರಲ್ಲಿ ಇನ್ನೆಷ್ಟು ತಡಮಾಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ಯೆಹೋಶುವ ಅವರಿಗೆ, “ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ನಾಡನ್ನು ಸ್ವಾಧೀನ ಮಾಡಿಕೊಳ್ಳಲು ಇನ್ನೆಷ್ಟು ತಡ ಮಾಡುತ್ತಿರುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ಯೆಹೋಶುವನು ಇಸ್ರೇಲರಿಗೆ, “ನೀವು ನಿಮ್ಮ ಭೂಮಿಯನ್ನು ಪಡೆದುಕೊಳ್ಳಲು ಅಷ್ಟು ದೀರ್ಘಕಾಲದವರೆಗೆ ಏಕೆ ಕಾಯುತ್ತೀರಿ? ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಈ ಭೂಮಿಯನ್ನು ನಿಮಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋಶುವನು ಇಸ್ರಾಯೇಲರಿಗೆ, “ನಿಮ್ಮ ತಂದೆಗಳ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಎಷ್ಟರವರೆಗೆ ಆಲಸ್ಯ ಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:3
15 ತಿಳಿವುಗಳ ಹೋಲಿಕೆ  

ಸೋಮಾರಿಯ ಆಶೆಯು ವ್ಯರ್ಥ; ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.


ಅವರು - ಏಳಿರಿ, ಅವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮದೇಶ. ನೀವು ಸುಮ್ಮನೆ ಕೂತುಕೊಳ್ಳುವದೇಕೆ? ತಡಮಾಡದೆ ಹೊರಡಿರಿ; ಆ ದೇಶವನ್ನು ಸ್ವತಂತ್ರಿಸಿಕೊಳ್ಳೋಣ.


ತಿರಿಗಿ ಹೆಚ್ಚುಕಡಿಮೆ ಸಾಯಂಕಾಲ ಐದು ಗಂಟೆಗೆ ಹೋಗಿ ಬೇರೆ ಕೆಲವರು ನಿಂತಿರುವದನ್ನು ಕಂಡು ಅವರನ್ನು - ದಿನವೆಲ್ಲಾ ಇಲ್ಲಿ ಯಾಕೆ ಸುಮ್ಮನೆ ನಿಂತಿದ್ದೀರಿ ಎಂದು ಕೇಳಲು


ಸೋಮಾರಿಯ ದಾರಿ ಮುಳ್ಳುಬೇಲಿ; ಯಥಾರ್ಥವಂತನ ಮಾರ್ಗ ರಾಜಮಾರ್ಗ.


ಜೋಲುಗೈ ದಾರಿದ್ರ್ಯ; ಚುರುಕುಗೈ ಐಶ್ವರ್ಯ.


ಆ ದಿನದಲ್ಲಿ ಯೆರೂಸಲೇವಿುಗೆ - ಚೀಯೋನೇ, ಭಯಪಡಬೇಡ, ನಿನ್ನ ಕೈಗಳು ಜೋಲುಬೀಳದಿರಲಿ;


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ಇಸ್ರಾಯೇಲ್ಯರಲ್ಲಿ ಇನ್ನೂ ಏಳು ಕುಲಗಳಿಗೆ ಪಾಲುಸಿಕ್ಕಿರಲಿಲ್ಲ.


ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇವಿುಸಿರಿ; ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.


ನಿನ್ನನ್ನು ಕೈಬಿಡುವದಿಲ್ಲ, ತೊರೆಯುವದಿಲ್ಲ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಯಾಕಂದರೆ ನಾನು ಈ ಜನರ ಪಿತೃಗಳಿಗೆ ಪ್ರಮಾಣಮಾಡಿ ಕೊಟ್ಟ ದೇಶವನ್ನು ಇವರಿಗೆ ನೀನೇ ಸ್ವಾಧೀನಪಡಿಸಬೇಕು.


ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ - ನೀನು ಈಗ ಮುದುಕನಾದಿ; ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು