Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:6 - ಕನ್ನಡ ಸತ್ಯವೇದವು J.V. (BSI)

6 ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲುಮಾಡಿ ಇಲ್ಲಿ ನನ್ನ ಬಳಿಗೆ ತೆಗೆದುಕೊಂಡು ಬರಲಿ; ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಬೇಕು. ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟು ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ನಾಡನ್ನು ಏಳು ಪಾಲಾಗಿ ವಿಂಗಡಿಸಿ ನನ್ನ ಬಳಿಗೆ ಬರಬೇಕು. ನಾನು ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನಿಮಗೋಸ್ಕರ ಚೀಟು ಹಾಕುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ನೀವು ಒಂದು ನಕ್ಷೆಯನ್ನು ಮಾಡಿ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಬೇಕು. ಆ ನಕ್ಷೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿ. ಯಾವ ಕುಲದವರು ಯಾವ ಭೂಮಿಯನ್ನು ತೆಗೆದುಕೊಳ್ಳಬೇಕೆಂಬುದನ್ನು ನಮ್ಮ ದೇವರಾದ ಯೆಹೋವನು ನಿರ್ಣಯಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ದೇಶವನ್ನು ಏಳು ಪಾಲಾಗಿ ವಿತರಿಸಬೇಕು ಮತ್ತು ಅದರ ವಿವರಗಳನ್ನು ಇಲ್ಲಿ ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಯೆಹೋವ ದೇವರ ಮುಂದೆ ನಿಮಗಾಗಿ ಚೀಟುಗಳನ್ನು ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:6
11 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ [ಯೊರ್ದನಿನ ಪಶ್ಚಿಮದ] ಕಾನಾನ್ ದೇಶವನ್ನು ಚೀಟುಹಾಕಿ ಇಸ್ರಾಯೇಲ್ಯರ ಒಂಭತ್ತುವರೆ ಕುಲದವರಿಗೆ ಸ್ವಾಸ್ತ್ಯವಾಗಿ ಹಂಚಿಕೊಟ್ಟರು.


ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟುಹಾಕಿ ದೇಶವನ್ನು ಅವರ ಶಾಖೆಗಳಿಗೆ ಹಂಚಿಕೊಟ್ಟನು.


ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲ ಮಾಡಿ ಆ ಜನರ ದೇಶವನ್ನು ಅವರಿಗೆ ಬಾಧ್ಯವಾಗಿ ಹಂಚಿಕೊಟ್ಟನು.


ಚೀಟುಹಾಕುವದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವದು.


ಉಡಿಯಲ್ಲಿ ಚೀಟು ಹಾಕಬಹುದು; ಅದರ ತೀರ್ಪು ಯೆಹೋವನದೇ.


ಅವರು ಇನ್ನೂ ಬಹು ಸ್ವಲ್ಪ ಜನರೂ ಕಾನಾನ್‍ದೇಶದಲ್ಲಿ ಪ್ರವಾಸಿಗಳೂ ಆಗಿರುವಾಗಲೇ


ದೇಶದ ಪಟ್ಟಿಯನ್ನು ಮಾಡತಕ್ಕ ಜನರು ಹೊರಡುವದಕ್ಕಿಂತ ಮುಂಚೆ ಯೆಹೋಶುವನು ಅವರಿಗೆ - ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಪಟ್ಟಿಮಾಡಿಕೊಂಡು ಶೀಲೋವಿಗೆ ನನ್ನ ಬಳಿಗೆ ಬನ್ನಿರಿ; ನಾನು ಯೆಹೋವನ ಮುಂದೆ ನಿಮಗೋಸ್ಕರ ಚೀಟುಹಾಕುವೆನು ಎಂದು ಹೇಳಿ ಕಳುಹಿಸಿದನು.


ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೆಲ್ಯರಿಗೆ - ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಯೆಹೋವನು ಆಜ್ಞಾಪಿಸಿದ ದೇಶವು ಇದೇ; ಒಂಭತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.


ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.


ಲೇವಿಯರಿಗೆ ನಿಮ್ಮ ಸಂಗಡ ಪಾಲು ಸಿಕ್ಕುವದಿಲ್ಲ; ಯೆಹೋವನ ಯಾಜಕ ಸೇವೆಯೇ ಅವರ ಸ್ವಾಸ್ತ್ಯವಾಗಿದೆ. ಗಾದ್ ರೂಬೇನ್ ಕುಲಗಳಿಗೂ ಮನಸ್ಸೆಕುಲದ ಅರ್ಧಜನರಿಗೂ ಯೊರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದ ಸ್ವಾಸ್ತ್ಯವು ಸಿಕ್ಕಿತು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು