Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:7 - ಕನ್ನಡ ಸತ್ಯವೇದವು J.V. (BSI)

7 ಲೇವಿಯರಿಗೆ ನಿಮ್ಮ ಸಂಗಡ ಪಾಲು ಸಿಕ್ಕುವದಿಲ್ಲ; ಯೆಹೋವನ ಯಾಜಕ ಸೇವೆಯೇ ಅವರ ಸ್ವಾಸ್ತ್ಯವಾಗಿದೆ. ಗಾದ್ ರೂಬೇನ್ ಕುಲಗಳಿಗೂ ಮನಸ್ಸೆಕುಲದ ಅರ್ಧಜನರಿಗೂ ಯೊರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದ ಸ್ವಾಸ್ತ್ಯವು ಸಿಕ್ಕಿತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಲೇವಿಯರಿಗೆ ನಿಮ್ಮ ಸಂಗಡ ಪಾಲು ಇರುವುದಿಲ್ಲ. ಯೆಹೋವನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸ್ವತ್ತಾಗಿದೆ. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧ ಜನರಿಗೂ ಯೊರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದಲೇ ಸ್ವತ್ತು ಸಿಕ್ಕಿದೆ,” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಲೇವಿಯರಿಗೆ ನಿಮ್ಮ ಹಾಗೆ ಪಾಲು ಸಿಕ್ಕುವುದಿಲ್ಲ. ಸರ್ವೇಶ್ವರನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸೊತ್ತು. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಜೋರ್ಡನಿನ ಪೂರ್ವದಿಕ್ಕಿನಲ್ಲಿ ಸರ್ವೇಶ್ವರನ ದಾಸ ಮೋಶೆಯಿಂದಲೇ ಸೊತ್ತು ಸಿಕ್ಕಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಲೇವಿಯ ಕುಲದವರಿಗೆ ಭೂಮಿಯಲ್ಲಿ ಪಾಲು ದೊರೆಯುವುದಿಲ್ಲ. ಯಾಜಕರಾಗಿ ಯೆಹೋವನ ಸೇವೆ ಮಾಡುವುದೇ ಅವರ ಪಾಲು. ಗಾದ್ಯರು, ರೂಬೇನ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ವಾಗ್ದಾನ ಮಾಡಲಾದ ಭೂಮಿಯನ್ನು ಈಗಾಗಲೇ ಪಡೆದುಕೊಂಡಿದ್ದಾರೆ. ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದಾರೆ. ಯೆಹೋವನ ಸೇವಕನಾದ ಮೋಶೆಯು ಈಗಾಗಲೇ ಆ ಭೂಮಿಯನ್ನು ಅವರಿಗೆ ಕೊಟ್ಟಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಲೇವಿಯರಿಗೆ ನಿಮ್ಮೊಳಗೆ ಪಾಲಿಲ್ಲ. ಏಕೆಂದರೆ ಅವರಿಗೆ ಯೆಹೋವ ದೇವರ ಯಾಜಕತ್ವವೇ ಅವರ ಸೊತ್ತು. ಇದಲ್ಲದೆ ಗಾದನೂ ರೂಬೇನನೂ ಮನಸ್ಸೆಯ ಅರ್ಧ ಗೋತ್ರವೂ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಯೆಹೋವ ದೇವರ ಸೇವಕನಾದ ಮೋಶೆಯಿಂದಲೇ ತಮಗೆ ಸೊತ್ತನ್ನು ತೆಗೆದುಕೊಂಡಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:7
11 ತಿಳಿವುಗಳ ಹೋಲಿಕೆ  

ಆದರೆ ಲೇವಿಯ ಕುಲಕ್ಕೆ ಮೋಶೆಯು ಸ್ವಾಸ್ತ್ಯವನ್ನು ಕೊಡಲಿಲ್ಲ. ಇಸ್ರಾಯೇಲ್‍ದೇವರಾದ ಯೆಹೋವನ ವಾಗ್ದಾನದಂತೆ ಆತನೇ ಅವರ ಸ್ವಾಸ್ತ್ಯವು.


ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನಂದರೆ - ಇಸ್ರಾಯೇಲ್ಯರ ದೇಶದಲ್ಲಿ ನಿನಗೆ ಸ್ವಂತಕ್ಕಾಗಿ ಭೂಸ್ಥಿತಿ ಆಗುವದಿಲ್ಲ; ಅವರೊಂದಿಗೆ ನಿನಗೆ ಪಾಲು ಇರುವದಿಲ್ಲ. ಇಸ್ರಾಯೇಲ್ಯರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಸ್ವಾಸ್ತ್ಯವಾಗಿಯೂ ಇದ್ದೇನೆ.


ಆದದರಿಂದ ವಿುಕ್ಕ ಇಸ್ರಾಯೇಲ್ಯರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವಾಸ್ತ್ಯ.


ಲೇವಿಯರೇ ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಬೇಕು; ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಆದರೆ ಇಸ್ರಾಯೇಲ್ಯರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯುಂಟಾಗುವದಿಲ್ಲ.


ನೀನೂ ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯೊಳಗಣ ಕಾರ್ಯಗಳನ್ನು ನಡಿಸಬೇಕು; ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು; ನಾನು ಯಾಜಕತ್ವವನ್ನು ನಿಮಗೇ ಅನುಗ್ರಹಿಸಿದ್ದೇನೆ; ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನೂ ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಕುಲದ ಅರ್ಧ ಜನರಿಗೂ ಸ್ವಾಸ್ತ್ಯವಾಗಿ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು