Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:8 - ಕನ್ನಡ ಸತ್ಯವೇದವು J.V. (BSI)

8 ದೇಶದ ಪಟ್ಟಿಯನ್ನು ಮಾಡತಕ್ಕ ಜನರು ಹೊರಡುವದಕ್ಕಿಂತ ಮುಂಚೆ ಯೆಹೋಶುವನು ಅವರಿಗೆ - ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಪಟ್ಟಿಮಾಡಿಕೊಂಡು ಶೀಲೋವಿಗೆ ನನ್ನ ಬಳಿಗೆ ಬನ್ನಿರಿ; ನಾನು ಯೆಹೋವನ ಮುಂದೆ ನಿಮಗೋಸ್ಕರ ಚೀಟುಹಾಕುವೆನು ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇಶದ ಪಟ್ಟಿಯನ್ನು ಮಾಡತಕ್ಕ ಜನರು ಹೊರಡುವುದಕ್ಕಿಂತ ಮೊದಲು ಯೆಹೋಶುವನು ಅವರಿಗೆ, “ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಪಟ್ಟಿಮಾಡಿಕೊಂಡು ಶೀಲೋವಿನಲ್ಲಿರುವ ನನ್ನ ಬಳಿಗೆ ಬನ್ನಿರಿ. ನಾನು ಯೆಹೋವನ ಮುಂದೆ ನಿಮಗೋಸ್ಕರ ಚೀಟು ಹಾಕುವೆನು” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾಡಿನ ಅಳತೆಯನ್ನು ಮಾಡತಕ್ಕ ಜನರು ಹೊರಡುವುದಕ್ಕೆ ಮುಂಚೆ ಯೆಹೋಶುವನು ಅವರಿಗೆ, “ಹೋಗಿ ನಾಡಿನಲ್ಲೆಲ್ಲಾ ಸಂಚರಿಸಿ ಅಳತೆಮಾಡಿ ನನ್ನ ಬಳಿ ಶೀಲೋವಿಗೆ ತನ್ನಿ. ನಾನು ಸರ್ವೇಶ್ವರನ ಮುಂದೆ ನಿಮಗೋಸ್ಕರ ಚೀಟು ಹಾಕುತ್ತೇನೆ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ಭೂಮಿಯನ್ನು ಪರಿಶೀಲಿಸಲು ಆರಿಸಲ್ಪಟ್ಟ ಜನರಿಗೆ ಯೆಹೋಶುವನು, “ಹೋಗಿ, ಭೂಮಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿರಿ; ಅದರ ನಕ್ಷೆಗಳನ್ನು ತೆಗೆಯಿರಿ. ಆಮೇಲೆ ಶೀಲೋವಿನಲ್ಲಿ ನಾನಿರುವ ಸ್ಥಳಕ್ಕೆ ಬನ್ನಿ. ಆಗ ನಾನು ಚೀಟುಹಾಕುತ್ತೇನೆ. ಯೆಹೋವನು ನಿಮ್ಮ ಪಾಲುಗಳನ್ನು ಕೊಡಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ಮನುಷ್ಯರು ನಾಡನ್ನು ಅಳತೆ ಮಾಡುವುದಕ್ಕಾಗಿ ಹೊರಟು ಹೋಗುವುದಕ್ಕೆ ಮುಂಚೆ ಯೆಹೋಶುವನು ಅವರಿಗೆ, “ನೀವು ಹೋಗಿ ದೇಶವೆಲ್ಲಾ ಸಂಚರಿಸಿ, ಅದನ್ನು ಅಳತೆಮಾಡಿ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. ನಾನು ಇಲ್ಲಿ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ನಿಮಗೆ ಚೀಟುಗಳನ್ನು ಹಾಕುವಂತೆ ನನ್ನ ಬಳಿಗೆ ಬನ್ನಿರಿ,” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:8
13 ತಿಳಿವುಗಳ ಹೋಲಿಕೆ  

ಆದದರಿಂದ ನಾವು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವವುಗಳನ್ನು ಸಾಧಿಸಿಕೊಳ್ಳೋಣ.


ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟುಹಾಕಿ ದೇಶವನ್ನು ಅವರ ಶಾಖೆಗಳಿಗೆ ಹಂಚಿಕೊಟ್ಟನು.


ಅನಂತರ ಸೌಲನು - ಇಸ್ರಾಯೇಲ್ ದೇವರೇ ಸತ್ಯವನ್ನು ತಿಳಿಸು ಎಂದು ಯೆಹೋವನನ್ನು ಪ್ರಾರ್ಥಿಸಿ ಚೀಟು ಹಾಕಿದಲ್ಲಿ ಅದು ಅವನಿಗೂ ಯೋನಾತಾನನಿಗೂ ಬಂದಿತು; ಜನರು ಪಾರಾದರು.


ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲುಮಾಡಿ ಇಲ್ಲಿ ನನ್ನ ಬಳಿಗೆ ತೆಗೆದುಕೊಂಡು ಬರಲಿ; ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟುಹಾಕುವೆನು.


ದೇಶವೆಲ್ಲಾ ವಶವಾದ ಮೇಲೆ ಇಸ್ರಾಯೇಲ್ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಎದೋಮ್ ಸೀಮೆಯೂ ಚಿನ್ ಅರಣ್ಯವೂ ಮೇರೆಯಾಗಿರುವ ಕಾನಾನ್ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಸಿಕ್ಕಿತು.


ಇವುಗಳನ್ನೂ ಸೇರಿಸಿ ದೇಶವನ್ನೆಲ್ಲಾ ಒಂಭತ್ತು ಕುಲಗಳಿಗೂ ಮನಸ್ಸೆಕುಲದ ಅರ್ಧಜನರಿಗೂ ಪಾಲುಮಾಡಿ ಕೊಡು ಅಂದನು.


ನೀನೆದ್ದು ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು ಎಂದು ಹೇಳಿದನು.


ಆ ಜನರು ಹೊರಟು ದೇಶದಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಅದರ ಗ್ರಾಮನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನು ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂದಿರುಗಿ ಬಂದರು.


ಆತನೇ ಇವುಗಳಿಗೆ ಪಾಲುಮಾಡಿಕೊಟ್ಟಿದ್ದಾನೆ, ಆತನ ಕೈಯೇ ನೂಲುಹಾಕಿ ದೇಶವನ್ನು ಹಂಚಿದೆ; ಅದು ಇವುಗಳಿಗೆ ನಿತ್ಯಸ್ವಾಸ್ತ್ಯವಾಗುವದು, ಅವು ತಲತಲಾಂತರಕ್ಕೂ ಅಲ್ಲಿ ವಾಸಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು