ಯೆಹೋಶುವ 18:9 - ಕನ್ನಡ ಸತ್ಯವೇದವು J.V. (BSI)9 ಆ ಜನರು ಹೊರಟು ದೇಶದಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಅದರ ಗ್ರಾಮನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನು ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂದಿರುಗಿ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ಜನರು ಹೊರಟು ದೇಶದಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಅದರ ಗ್ರಾಮ ನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನಾಗಿ ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂತಿರುಗಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆ ಜನರು ಹೊರಟು ನಾಡಿನಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಗ್ರಾಮ-ನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನಾಗಿ ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂದಿರುಗಿ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅಂತೆಯೇ ಅವರು ಹೋಗಿ ಭೂಮಿಯನ್ನು ಚೆನ್ನಾಗಿ ಪರಿಶೀಲಿಸಿದರು; ಯೆಹೋಶುವನಿಗಾಗಿ ನಕ್ಷೆಗಳನ್ನು ತೆಗೆದರು. ಅವರು ಪ್ರತಿಯೊಂದು ಹಳ್ಳಿಯನ್ನು ಪರಿಶೀಲಿಸಿದರು. ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಿದರು. ಅವರು ನಕ್ಷೆಗಳನ್ನು ತೆಗೆದು ಯೆಹೋಶುವನ ಬಳಿಗೆ ಶೀಲೋವಿಗೆ ಹಿಂತಿರುಗಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆ ಮನುಷ್ಯರು ಆ ನಾಡಿಗೆ ಹೋಗಿ, ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಗ್ರಂಥದಲ್ಲಿ ಬರೆದುಕೊಂಡು ಶೀಲೋವಿನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರುಗಿ ಬಂದರು. ಅಧ್ಯಾಯವನ್ನು ನೋಡಿ |