Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:26 - ಕನ್ನಡ ಸತ್ಯವೇದವು J.V. (BSI)

26 ಅಲಮ್ಮೆಲೆಕ್, ಅಮಾದ್, ವಿುಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಗುಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಲಮ್ಮೆಲೆಕ್, ಅಮಾದ್, ಮಿಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ, ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ ಅಲ್ಲಿಂದ ಪೂರ್ವಕ್ಕೆ ತಿರುಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಲಮ್ಮೆಲೆಕ್, ಅಮಾದ್, ಮಿಷಾಲ್. ಇವರ ನಾಡಿನ ಎಲ್ಲೆ ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಲಮ್ಮೆಲೆಕ್, ಅಮಾದ್ ಮತ್ತು ಮಿಷಾಲ್. ಇದರ ಪಶ್ಚಿಮ ಮೇರೆಯು ಕರ್ಮೆಲ್ ಬೆಟ್ಟ ಮತ್ತು ಶೀಹೋರ್‌ಲಿಬ್ನತ್‌ವರೆಗೆ ಚಾಚಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅಲಮ್ಮೆಲೆಕ್, ಅಮಾದ್, ಮಿಷಾಲ್ ಎಂಬ ಪಟ್ಟಣಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲ್, ಶೀಹೋರ್ ಲಿಬ್ನತ್ ಕಡೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:26
15 ತಿಳಿವುಗಳ ಹೋಲಿಕೆ  

ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ. ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ [ತಳಿರುಗಳನ್ನು] ಉದುರಿಸಿಬಿಟ್ಟಿವೆ.


ನಿನ್ನ ಶಿರಸ್ಸು ಕರ್ಮೆಲ್ ಬೆಟ್ಟದಂತೆ ಗಂಭೀರ; ನಿನ್ನ ತಲೆಯ ಕೂದಲು ಧೂಮ್ರವರ್ಣವು; ರಾಜನು ಅದರ ತೆಕ್ಕೆತೆಕ್ಕೆಗಳಲ್ಲಿ ಕಟ್ಟುಬಿದ್ದಿದ್ದಾನೆ.


ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.


ಅಹಾಬನು ಇಸ್ರಾಯೇಲ್ಯರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರಿಸಿದನು.


ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದ ಹಾಗೂ ಉನ್ನತನಾದವನೊಬ್ಬನು ಬರುವನು.


ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ - ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ;


ಅದು ಸಮೃದ್ಧಿಯಾಗಿ ಹೂಬಿಟ್ಟು ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವದು; ಲೆಬನೋನಿನ ಮಹಿಮೆಯೂ ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ ನಮ್ಮ ದೇವರ ವೈಭವವನ್ನೂ ಕಾಣುವವು.


ಆಶೇರ್‍ಕುಲದ ಸ್ವಾಸ್ತ್ಯದಿಂದ ಮಾಷಾಲ್, ಅಬ್ದೋನ್,


ಅವನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವದಕ್ಕೆ ಹೊರಟಾಗ ಅವನಿಗೆ - ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನೆಂಬ ವರ್ತಮಾನವು ಬಂದದರಿಂದ ಸಮುವೇಲನು ಅಲ್ಲಿಗೆ ಹೋದನು.


ಆಶೇರ್‍ಕುಲದಿಂದ ವಿುಷಾಲ್, ಅಬ್ದೋನ್,


ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್,


ಅಲ್ಲಿಂದ ಪೂರ್ವಕ್ಕೆ ತಿರುಗಿ ಬೇತ್‍ದಾಗೋನಿಗೆ ಹೋಗುತ್ತದೆ. ಅಲ್ಲಿಂದ ಜೆಬುಲೂನ್ಯರ ಮೇರೆಗೂ ಇಪ್ತಹೇಲ್‍ತಗ್ಗಿನ ಉತ್ತರ ದಿಕ್ಕಿನ ಮೂಲೆಗೂ ಹೊಂದಿಕೊಂಡು ಬೇತ್ಏಮೆಕ್, ನೆಗೀಯೇಲ್ ಇವುಗಳ ಮೇಲೆ ಉತ್ತರಕ್ಕೆ ಮುಂದರಿದು


ನೀನು ಈಗ ಎಲ್ಲಾ ಇಸ್ರಾಯೇಲ್ಯರನ್ನೂ ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಮಂದಿ ಪ್ರವಾದಿಗಳನ್ನೂ ಅಶೇರದೇವತೆಯ ನಾನೂರು ಮಂದಿ ಪ್ರವಾದಿಗಳನ್ನೂ ಕರ್ಮೆಲ್‍ಬೆಟ್ಟಕ್ಕೆ ಕರಿಸು ಎಂದು ಹೇಳಿದನು.


ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,


ಎಲೀಷನು ಅಲ್ಲಿಂದ ಕರ್ಮೆಲ್‍ಬೆಟ್ಟಕ್ಕೆ ಹೋಗಿ ಅನಂತರ ಸಮಾರ್ಯಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು