ಯೆಹೋಶುವ 19:47 - ಕನ್ನಡ ಸತ್ಯವೇದವು J.V. (BSI)47 ದಾನ್‍ಕುಲದವರು ತಮ್ಮ ಪ್ರಾಂತವನ್ನು ವಿಸ್ತರಿಸುವದಕ್ಕಾಗಿ ಹೊರಟು ಲೆಷೆವಿುನವರೊಡನೆ ಯುದ್ಧಮಾಡಿ ಜಯಿಸಿ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು. ಮತ್ತು ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿ ಆ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸಿಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿದರು. ಆ ಜನರನ್ನು ಕತ್ತಿಯಿಂದ ಸಂಹರಿಸಿ ಅವರ ನಗರವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು. ಅಲ್ಲದೆ, ಅದಕ್ಕೆ ತಮ್ಮ ಮೂಲ ಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ದಾನ್‌ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವಲ್ಲಿ ಕಷ್ಟಪಡಬೇಕಾಯಿತು. ಅಲ್ಲಿ ಅವರಿಗೆ ಬಲಿಷ್ಠರಾದ ವೈರಿಗಳಿದ್ದರು. ದಾನ್ ಕುಲದವರು ಅವರನ್ನು ಸುಲಭವಾಗಿ ಸೋಲಿಸಲಾಗಲಿಲ್ಲ. ಆದ್ದರಿಂದ ಅವರು ಲೆಷೆಮ್ ಜನರೊಡನೆ ಯುದ್ಧಮಾಡಿ ಅವರನ್ನು ಸಂಹರಿಸಿ ಲೆಷೆಮ್ ಪಟ್ಟಣದಲ್ಲಿ ನೆಲೆಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಇದಲ್ಲದೆ ದಾನನ ಗೋತ್ರದ ಮೇರೆಯು ಅವರಿಗೆ ಸಾಲದ್ದರಿಂದ ಅವರು ಹೊರಟುಹೋಗಿ ಲೆಷೆಮಿನ ಮೇಲೆ ಖಡ್ಗದಿಂದ ಯುದ್ಧಮಾಡಿ, ಅದನ್ನು ಸೋಲಿಸಿ, ಸ್ವಾಧೀನಮಾಡಿಕೊಂಡರು. ಅವರು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿ |