Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:10 - ಕನ್ನಡ ಸತ್ಯವೇದವು J.V. (BSI)

10 ನೀವು ಐಗುಪ್ತದಿಂದ ಹೊರಟು ಬಂದ ಮೇಲೆ ಯೆಹೋವನು ನಿಮ್ಮ ಮುಂದೆ ಕೆಂಪು ಸಮುದ್ರವನ್ನು ಬತ್ತಿಸಿಬಿಟ್ಟದ್ದನ್ನೂ ನೀವು ಯೊರ್ದನಿನ ಆಚೆಯಲ್ಲಿರುವ ಸೀಹೋನ್ ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನಿರ್ಮೂಲ ಮಾಡಿದ್ದನ್ನೂ ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಐಗುಪ್ತದಿಂದ ಹೊರಟು ಬಂದ ಮೇಲೆ ಯೆಹೋವನು ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟಿದ್ದನ್ನೂ, ನೀವು ಯೊರ್ದನಿನ ಆಚೆಯಲ್ಲಿರುವ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನಾಶಮಾಡಿದ್ದನ್ನೂ ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀವು ಈಜಿಪ್ಟಿನಿಂದ ಹೊರಟುಬಂದ ಮೇಲೆ ಸರ್ವೇಶ್ವರ ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟರೆಂದು ಕೇಳಿದ್ದೇವೆ. ಅಲ್ಲದೆ ಜೋರ್ಡನ್ನಿನ ಆಚೆ ಇರುವ ಅಮೋರಿಯರ ಅರಸರಿಬ್ಬರನ್ನು ಅಂದರೆ, ಸೀಹೋನ್ ಮತ್ತು ಓಗ್ ಎಂಬವರನ್ನು ನೀವು ನಾಶಮಾಡಿದಿರೆಂದು ಕೇಳಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ನಿಮಗೆ ಸಹಾಯ ಮಾಡಿದ ರೀತಿಯ ಬಗ್ಗೆ ನಾವು ಕೇಳಿ ಭಯಗೊಂಡಿದ್ದೇವೆ. ನೀವು ಈಜಿಪ್ಟಿನಿಂದ ಹೊರಬಂದ ಮೇಲೆ ಆತನು ಕೆಂಪುಸಮುದ್ರದ ನೀರನ್ನು ಬತ್ತಿಸಿದ್ದನ್ನು ನಾವು ಕೇಳಿದ್ದೇವೆ. ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನೀವು ಹೇಗೆ ನಾಶಮಾಡಿದಿರೆಂಬುದನ್ನೂ ಕೇಳಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವು ಈಜಿಪ್ಟಿನಿಂದ ಹೊರಡುವಾಗ ಯೆಹೋವ ದೇವರು ಹೇಗೆ ನಿಮಗೋಸ್ಕರ ಕೆಂಪುಸಮುದ್ರದ ನೀರನ್ನು ಬತ್ತಿಹೋಗಮಾಡಿದ್ದನ್ನೂ, ನೀವು ಸಂಪೂರ್ಣ ನಿರ್ಮೂಲ ಮಾಡಿದ ಯೊರ್ದನ್ ನದಿ ಆಚೆಯಲ್ಲಿದ್ದ ಅಮೋರಿಯರ ಇಬ್ಬರು ಅರಸುಗಳಾದ ಸೀಹೋನನಿಗೂ, ಓಗನಿಗೂ ಮಾಡಿದ್ದನ್ನೂ ನಾವು ಕೇಳಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:10
13 ತಿಳಿವುಗಳ ಹೋಲಿಕೆ  

ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿವ್ಮಿುಂದ ಸೋತುಹೋಗಬೇಕೆಂಬದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪ; ಅದು ಈಗಾಗಲೇ ನೆರವೇರಿತಲ್ಲಾ.


ಅವರನ್ನು ಐಗುಪ್ತದೇಶದಿಂದ ಕರಕೊಂಡು ಬಂದವನು ದೇವರೇ; ಅವರು ಕಾಡುಕೋಣದಷ್ಟು ಬಲವುಳ್ಳವರು.


ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವರು. ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವರು ಅಂದನು.


ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ - ತಮ್ಮ ಸಂಬಂಧಿಕರಾದ ಇಸ್ರಾಯೇಲ್ಯರು ಕೇಳಿಕೊಳ್ಳುವದೇನಂದರೆ - ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಷ್ಟೆ.


ಅವರನ್ನು ಐಗುಪ್ತದೇಶದಿಂದ ಕರಕೊಂಡು ಬಂದವನು ದೇವರೇ; ಅವರು ಕಾಡಕೋಣದಷ್ಟು ಬಲವುಳ್ಳವರು. ಅವರು ಶತ್ರುಜನಗಳನ್ನು ನಿರ್ಮೂಲಮಾಡುವರು; ವೈರಿಗಳ ಎಲುಬನ್ನು ಮುರಿದುಹಾಕುವರು; ಅವರನ್ನು ಬಾಣಗಳಿಂದ ಗಾಯಪಡಿಸುವರು.


ಯೊರ್ದನಿನ ಪಶ್ಚಿಮದಲ್ಲಿದ್ದ ಎಲ್ಲಾ ಅಮೋರಿಯರ ಅರಸರೂ ಸಮುದ್ರದ ಬಳಿಯಲ್ಲಿದ್ದ ಸರ್ವ ಕಾನಾನ್ ರಾಜರೂ ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನನ್ನು ಬತ್ತಿಸಿ ಅವರನ್ನು ದಾಟಿಸಿದನೆಂದು ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿವಿುತ್ತವಾಗಿ ಅವರಿಗೆ ಧೈರ್ಯವಿಲ್ಲವಾಯಿತು.


ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.


ಹೆಷ್ಬೋನಿನ ಅರಸನಾದ ಸೀಹೋನ್, ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಎಂಬ ಈ ಇಬ್ಬರು ಅಮೋರಿಯರ ಅರಸರಿಗೆ ಮಾಡಿದ್ದೆಲ್ಲವನ್ನೂ ಕೇಳಿ -


ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನೂ ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿಬಿಲ್ಲುಗಳಿಂದಾದದ್ದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು