ಯೆಹೋಶುವ 2:11 - ಕನ್ನಡ ಸತ್ಯವೇದವು J.V. (BSI)11 ನಮ್ಮ ಎದೆಯೊಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಒಬ್ಬನಲ್ಲಿಯೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಮ್ಮ ಎದೆ ಒಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಯಾರಿಗೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇದನ್ನೆಲ್ಲಾ ಕೇಳಿ ನಮ್ಮ ಎದೆ ಒಡೆದುಹೋಗಿದೆ. ನಿಮ್ಮನ್ನು ಎದುರಿಸುವ ಧೈರ್ಯ ಯಾರಿಗೂ ಇಲ್ಲ. ನಿಮ್ಮ ದೇವರಾದ ಸರ್ವೇಶ್ವರರೊಬ್ಬರೇ ಪರಲೋಕದಲ್ಲೂ ಭೂಲೋಕದಲ್ಲೂ ದೇವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇವೆಲ್ಲವುಗಳ ಬಗ್ಗೆ ಕೇಳಿ ನಮಗೆ ಅತೀವ ಭಯವಾಗಿದೆ; ನಮ್ಮಲ್ಲಿ ಯಾರಿಗೂ ನಿಮ್ಮೊಂದಿಗೆ ಯುದ್ಧ ಮಾಡಲು ಧೈರ್ಯವಿಲ್ಲ. ಏಕೆಂದರೆ ನಿಮ್ಮ ದೇವರಾದ ಯೆಹೋವನು, ಭೂಪರಲೋಕಗಳನ್ನು ಆಳುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕುಂದಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ನಿಮ್ಮ ದೇವರಾದ ಯೆಹೋವ ದೇವರೇ ಮೇಲಿರುವ ಪರಲೋಕದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾರೆ. ಅಧ್ಯಾಯವನ್ನು ನೋಡಿ |