ಯೆಹೋಶುವ 2:14 - ಕನ್ನಡ ಸತ್ಯವೇದವು J.V. (BSI)14 ಆಗ ಆ ಮನುಷ್ಯರು - ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುವೆವು; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಮ್ಮ ಮಾತಿನಂತೆ ನಿನ್ನಲ್ಲಿ ದಯದಿಂದ ನಡೆದುಕೊಳ್ಳುವೆವು ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಆ ಗೂಢಚಾರರು, “ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ. ಸರ್ವೇಶ್ವರಸ್ವಾಮಿ ಈ ನಾಡನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ದಯೆಯಿಂದ ನಡೆದುಕೊಳ್ಳುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅದಕ್ಕೆ ಅವರು, “ನಮ್ಮ ಪ್ರಾಣವನ್ನಾದರೂ ಕೊಟ್ಟು ನಿಮ್ಮ ಪ್ರಾಣ ಉಳಿಸುತ್ತೇವೆ. ಆದರೆ ನೀವು ಇದನ್ನು ಯಾರಿಗೂ ಹೇಳಬೇಡಿ. ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ನಿಮಗೆ ದಯೆ ತೋರುತ್ತೇವೆ. ನೀನು ನಮ್ಮನ್ನು ನಂಬಬಹುದು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಅವರು ಆಕೆಗೆ, “ನೀನು ಈ ನಮ್ಮ ಕಾರ್ಯವನ್ನು ಬಹಿರಂಗ ಮಾಡದೆ ಇದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿ ಇರುವೆವು. ಯೆಹೋವ ದೇವರು ನಮಗೆ ದೇಶವನ್ನು ಕೊಟ್ಟಾಗ, ಸತ್ಯದಿಂದಲೂ, ದಯೆಯಿಂದಲೂ ನಡೆದುಕೊಳ್ಳುವೆವು,” ಎಂದರು. ಅಧ್ಯಾಯವನ್ನು ನೋಡಿ |