ಯೆಹೋಶುವ 2:19 - ಕನ್ನಡ ಸತ್ಯವೇದವು J.V. (BSI)19 ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ರಕ್ತಾಪರಾಧವು ಅವರ ತಲೆಯ ಮೇಲೆಯೇ ಇರುವದು; ನಾವು ನಿರ್ದೋಷಿಗಳು. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಕೈ ಹಾಕುವದಾದರೆ ಆ ರಕ್ತಾಪರಾಧವು ನಮ್ಮ ತಲೆಯ ಮೇಲಿರುವದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು; ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈ ಮಾಡಿದ್ದಾದರೆ ಆ ರಕ್ತಾಪರಾಧವು ನಮ್ಮ ತಲೆಯ ಮೇಲೆ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು ಆಗುವರು. ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈಮಾಡಿದ್ದಾದರೆ ಆ ರಕ್ತಾಪರಾಧ ನಮ್ಮ ತಲೆಯ ಮೇಲಿರುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಈ ಮನೆಯಲ್ಲಿರುವ ಪ್ರತಿಯೊಬ್ಬರನ್ನು ನಾವು ಕಾಪಾಡುತ್ತೇವೆ. ನಿನ್ನ ಮನೆಯಲ್ಲಿ ಯಾರಿಗಾದರೂ ಪೆಟ್ಟಾದರೆ ಅದಕ್ಕೆ ನಾವು ಹೊಣೆಗಾರರಾಗುವೆವು. ಆದರೆ ಯಾರಾದರೂ ನಿನ್ನ ಮನೆಯಿಂದ ಹೊರಗೆ ಹೋದಾಗ ಕೊಲ್ಲಲ್ಪಟ್ಟರೆ ಅದಕ್ಕೆ ನಾವು ಹೊಣೆಗಾರರಲ್ಲ; ಅದಕ್ಕೆ ಅವರೇ ಹೊಣೆಗಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯಾವನಾದರೂ ನಿನ್ನ ಮನೆಯ ಬಾಗಿಲಿನಿಂದ ಹೊರಗೆ ಹೊರಟು ಬೀದಿಗೆ ಬಂದರೆ, ಅವನ ರಕ್ತವು ಅವನ ತಲೆಯ ಮೇಲೆ ಇರುವುದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಮಾಡಿದರೆ, ಅವನ ರಕ್ತ ಅಪರಾಧವು ನಮ್ಮ ತಲೆಯ ಮೇಲೆ ಇರುವುದು. ಅಧ್ಯಾಯವನ್ನು ನೋಡಿ |