ಯೆಹೋಶುವ 2:2 - ಕನ್ನಡ ಸತ್ಯವೇದವು J.V. (BSI)2 ಆಗ ಜನರು ಯೆರಿಕೋವಿನ ಅರಸನಿಗೆ - ಇಗೋ, ಈ ರಾತ್ರಿ ಇಸ್ರಾಯೇಲ್ಯರ ಕಡೆಯವರು ನಮ್ಮ ದೇಶವನ್ನು ಸಂಚರಿಸಿ ನೋಡುವದಕ್ಕೆ ಬಂದಿದ್ದಾರೆಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಜನರು ಯೆರಿಕೋವಿನ ಅರಸನಿಗೆ “ಇಗೋ, ಈ ರಾತ್ರಿ ಇಸ್ರಾಯೇಲ್ಯರ ಕಡೆಯವರು ನಮ್ಮ ದೇಶವನ್ನು ಸಂಚರಿಸಿ ಹೊಂಚುಹಾಕುವುದಕ್ಕೆ ಬಂದಿದ್ದಾರೆ” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಸ್ರಯೇಲಿನ ಕೆಲವು ಜನರು ನಮ್ಮ ನಾಡಿನಲ್ಲಿ ಸಂಚರಿಸಿ ನೋಡಲು ಈ ರಾತ್ರಿ ನಗರಕ್ಕೆ ಬಂದಿದ್ದಾರೆಂದು ಜೆರಿಕೋವಿನ ಅರಸನಿಗೆ ತಿಳಿಸಲಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಯಾರೋ ಒಬ್ಬರು ಜೆರಿಕೊ ನಗರದ ರಾಜನಿಗೆ, “ನಿನ್ನೆ ರಾತ್ರಿ ಇಸ್ರೇಲರ ಕಡೆಯ ಕೆಲವರು ನಮ್ಮ ದೇಶದ ದೌರ್ಬಲ್ಯಗಳನ್ನು ಕಂಡುಹಿಡಿಯುವುದಕ್ಕಾಗಿ ಬಂದಿದ್ದಾರೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆರಿಕೋವಿನ ಅರಸನಿಗೆ, “ಇಗೋ, ಇಸ್ರಾಯೇಲರಲ್ಲಿ ಕೆಲವರು ದೇಶವನ್ನು ಗೂಢಚಾರ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾರೆ,” ಎಂದು ತಿಳಿಸಲಾಯಿತು. ಅಧ್ಯಾಯವನ್ನು ನೋಡಿ |