Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:23 - ಕನ್ನಡ ಸತ್ಯವೇದವು J.V. (BSI)

23 ಆಗ ಅವರಿಬ್ಬರೂ ಬೆಟ್ಟದಿಂದಿಳಿದು ಹೊಳೆದಾಟಿ ನೂನನ ಮಗನಾದ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಅವರಿಬ್ಬರೂ ಬೆಟ್ಟದಿಂದಿಳಿದು, ಹೊಳೆದಾಟಿ, ನೂನನ ಮಗನಾದ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಅವರಿಬ್ಬರೂ ಬೆಟ್ಟದಿಂದಿಳಿದು, ನದಿದಾಟಿ, ನೂನನ ಮಗ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಇವರಿಬ್ಬರು ಬೆಟ್ಟದಿಂದಿಳಿದು ನದಿಯನ್ನು ದಾಟಿ ಯೆಹೋಶುವನ ಬಳಿಗೆ ಹೋಗಿ ತಾವು ತಿಳಿದುಕೊಂಡ ಎಲ್ಲವನ್ನು ತಿಳಿಸಿದರು. ಅವರು ಯೆಹೋಶುವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಅವರಿಬ್ಬರು ಹಿಂದಿರುಗಿ ಬೆಟ್ಟದಿಂದ ಇಳಿದು, ನದಿಯನ್ನು ದಾಟಿ, ನೂನನ ಮಗ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ಅವರಿಗೆ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:23
4 ತಿಳಿವುಗಳ ಹೋಲಿಕೆ  

ಅವರು ಆ ಪರ್ವತವನ್ನು ಸೇರಿ ಬೆನ್ನಟ್ಟುವವರು ಹಿಂದಿರುಗುವ ತನಕ ಮೂರು ದಿವಸ ಅಲ್ಲೇ ಇದ್ದರು. ಬೆನ್ನಟ್ಟುವವರು ಅವರನ್ನು ದಾರಿಯುದ್ದಕ್ಕೂ ಹುಡುಕಿ ಕಾಣದೆ ಹಿಂದಿರುಗಿದರು.


ಇದಲ್ಲದೆ ಅವರು ಯೆಹೋಶುವನಿಗೆ - ಯೆಹೋವನು ನಿಜವಾಗಿ ಆ ದೇಶವನ್ನೆಲ್ಲಾ ನಮಗೆ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿವಿುತ್ತ ಕಂಗೆಟ್ಟು ಹೋಗಿದ್ದಾರೆ ಎಂದು ತಿಳಿಸಿದರು.


ಅವರು - ಏಳಿರಿ, ಅವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮದೇಶ. ನೀವು ಸುಮ್ಮನೆ ಕೂತುಕೊಳ್ಳುವದೇಕೆ? ತಡಮಾಡದೆ ಹೊರಡಿರಿ; ಆ ದೇಶವನ್ನು ಸ್ವತಂತ್ರಿಸಿಕೊಳ್ಳೋಣ.


ನೀವು ಅಲ್ಲಿಗೆ ಹೋಗುವದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ ಅವರ ದೇಶವು ಬಹು ವಿಸ್ತಾರವಾಗಿದೆಯೆಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲೇ ಇಲ್ಲ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು