Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:24 - ಕನ್ನಡ ಸತ್ಯವೇದವು J.V. (BSI)

24 ಇದಲ್ಲದೆ ಅವರು ಯೆಹೋಶುವನಿಗೆ - ಯೆಹೋವನು ನಿಜವಾಗಿ ಆ ದೇಶವನ್ನೆಲ್ಲಾ ನಮಗೆ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿವಿುತ್ತ ಕಂಗೆಟ್ಟು ಹೋಗಿದ್ದಾರೆ ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದಲ್ಲದೆ ಅವರು “ಯೆಹೋಶುವನಿಗೆ ನಿಶ್ಚಯವಾಗಿ ಯೆಹೋವನು ಆ ದೇಶವನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿಮಿತ್ತ ನಡುಗುತ್ತಾ ಕಂಗೆಟ್ಟು ಹೋಗಿದ್ದಾರೆ” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇದಲ್ಲದೆ, ಅವರು ಯೆಹೋಶುವನಿಗೆ, “ಸರ್ವೇಶ್ವರಸ್ವಾಮಿ ನಿಜವಾಗಿ ಈ ನಾಡನ್ನೆಲ್ಲಾ ನಮಗೆ ಕೊಟ್ಟಿದ್ದಾರೆ. ಅದರ ನಿವಾಸಿಗಳೆಲ್ಲ ನಮ್ಮನ್ನು ಕಂಡು ನಡುಗುತ್ತ ಇದ್ದಾರೆ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಯೆಹೋವನು ನಿಜವಾಗಿಯೂ ಆ ದೇಶವನ್ನೆಲ್ಲಾ ನಮಗೆ ದಯಪಾಲಿಸಿದ್ದಾನೆ. ಆ ದೇಶದ ಎಲ್ಲ ಜನರು ನಮ್ಮಿಂದ ಭಯಗೊಂಡಿದ್ದಾರೆ” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವರು ಯೆಹೋಶುವನಿಗೆ, “ನಿಶ್ಚಯವಾಗಿ ಯೆಹೋವ ದೇವರು ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ದೇಶದ ನಿವಾಸಿಗಳೆಲ್ಲರೂ ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:24
16 ತಿಳಿವುಗಳ ಹೋಲಿಕೆ  

ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗೆ ನೇವಿುಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.


ಸುಗ್ಗೀಕಾಲದಲ್ಲಿ ಹಿಮದ ಶೈತ್ಯವು ಹೇಗೋ ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ.


ಯೊರ್ದನಿನ ಪಶ್ಚಿಮದಲ್ಲಿದ್ದ ಎಲ್ಲಾ ಅಮೋರಿಯರ ಅರಸರೂ ಸಮುದ್ರದ ಬಳಿಯಲ್ಲಿದ್ದ ಸರ್ವ ಕಾನಾನ್ ರಾಜರೂ ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನನ್ನು ಬತ್ತಿಸಿ ಅವರನ್ನು ದಾಟಿಸಿದನೆಂದು ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿವಿುತ್ತವಾಗಿ ಅವರಿಗೆ ಧೈರ್ಯವಿಲ್ಲವಾಯಿತು.


ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವದನ್ನೆಲ್ಲಾ ಕೈಕೊಂಡು ನಡಿ. ಆಗ ನಿನ್ನ ಮಾರ್ಗದಲ್ಲೆಲ್ಲಾ ಸಫಲನಾಗುವಿ, ಕೃತಾರ್ಥನಾಗುವಿ.


ಫಿಲಿಷ್ಟಿಯರಿಗೆ ಸಂಕಟವಾಯಿತು; ಎದೋಮ್ಯರ ಕುಲಪತಿಗಳು ಕಳವಳಗೊಂಡರು; ಮೋವಾಬ್ಯರ ಮುಖಂಡರು ಗಡಗಡನೆ ನಡುಗುತ್ತಾರೆ; ಕಾನಾನ್ ದೇಶದವರು ಕರಗಿಹೋದರು;


ಆಗ ಅವರಿಬ್ಬರೂ ಬೆಟ್ಟದಿಂದಿಳಿದು ಹೊಳೆದಾಟಿ ನೂನನ ಮಗನಾದ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದರು.


ಅದೇ ದಿವಸ ರಾತ್ರಿಯಲ್ಲಿ ಯೆಹೋವನು ಅವನಿಗೆ - ನೀನು ಎದ್ದು ಹೋಗಿ ಶತ್ರುಗಳ ಪಾಳೆಯದ ಮೇಲೆ ಬೀಳು; ಅದನ್ನು ನಿನಗೆ ಒಪ್ಪಿಸಿಕೊಟ್ಟಿದ್ದೇನೆ.


ಆಗ ಯೆಹೋವನು ಯೆಹೋಶುವನಿಗೆ - ನೋಡು, ನಾನು ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧವೀರರನ್ನೂ ನಿನ್ನ ಕೈಗೆ ಒಪ್ಪಿಸಿದ್ದೇನೆ.


ಅನಂತರ ಯೆಹೋವನು ಯೆಹೋಶುವನಿಗೆ - ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ತೆಗೆದುಕೊಂಡು ಆಯಿಗೆ ಹೋಗು.


ಆತನು ಅವರಿಗೆ - ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ ಅಂದನು.


ನೀವು ಅಲ್ಲಿಗೆ ಹೋಗುವದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ ಅವರ ದೇಶವು ಬಹು ವಿಸ್ತಾರವಾಗಿದೆಯೆಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲೇ ಇಲ್ಲ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು