Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:4 - ಕನ್ನಡ ಸತ್ಯವೇದವು J.V. (BSI)

4 ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು ಕೇಳ ಬಂದವರಿಗೆ - ಆ ಮನುಷ್ಯರು ನನ್ನ ಬಳಿಗೆ ಬಂದದ್ದು ನಿಜ; ಅವರು ಎಲ್ಲಿಯವರೆಂಬದು ನನಗೆ ಗೊತ್ತಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು ಕೇಳಲು ಬಂದವರಿಗೆ, “ಆ ಮನುಷ್ಯರು ನನ್ನ ಬಳಿಗೆ ಬಂದದ್ದು ನಿಜ; ಅವರು ಎಲ್ಲಿಯವರೆಂಬುದು ನನಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ವೇಶ್ಯೆ ಆ ಇಬ್ಬರನ್ನು ಅಡಗಿಸಿಟ್ಟು, ಕೇಳಲು ಬಂದವರಿಗೆ, “ಆ ವ್ಯಕ್ತಿಗಳು ನನ್ನ ಬಳಿಗೆ ಬಂದದ್ದೇನೋ ನಿಜ. ಅವರು ಎಲ್ಲಿಯವರೆಂದು ನನಗೆ ತಿಳಿಯದೆ ಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ರಾಹಾಬಳು ಈ ಇಬ್ಬರನ್ನು ಅಡಗಿಸಿಟ್ಟಿದ್ದಳು. ಆದರೆ ಆಕೆಯು ಕೇಳಬಂದವರಿಗೆ, “ಇಬ್ಬರು ಮನುಷ್ಯರು ಇಲ್ಲಿಗೆ ಬಂದಿದ್ದರು, ಆದರೆ ಅವರು ಎಲ್ಲಿಂದ ಬಂದಿದ್ದರೆಂಬುದು ನನಗೆ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು, “ನನ್ನ ಬಳಿಗೆ ಇಬ್ಬರು ಮನುಷ್ಯರು ಬಂದಿದ್ದರು. ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:4
9 ತಿಳಿವುಗಳ ಹೋಲಿಕೆ  

ಆಗ ಎಲೀಷನು ಅವರಿಗೆ - ನೀವು ಹೋಗಬೇಕೆಂದಿದ್ದ ಪಟ್ಟಣವೂ ದಾರಿಯೂ ಇದಲ್ಲ; ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರಕೊಂಡು ಹೋಗುತ್ತೇನೆ ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರಕೊಂಡು ಹೋದನು.


ಇಬ್ರಿಯರ ಸ್ತ್ರೀಯರು ಐಗುಪ್ತ ಸ್ತ್ರೀಯರಂತಲ್ಲ; ಅವರು ಚುರುಕಾಗಿದ್ದಾರೆ; ಅವರು ಸೂಲಗಿತ್ತಿಯು ತಮ್ಮ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುವರು ಎಂದು ಹೇಳಿದರು.


ಅದೇ ರೀತಿಯಾಗಿ ಸೂಳೆಯಾದ ರಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿವಂತಳೆಂಬ ನಿರ್ಣಯವನ್ನು ಹೊಂದಿದಳಲ್ಲವೇ.


ಯೆರಿಕೋವಿನ ಅರಸನು ರಾಹಾಬಳಿಗೆ - ನಿನ್ನ ಮನೆಯಲ್ಲಿಳುಕೊಂಡಿರುವ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡುವದಕ್ಕೆ ಬಂದವರು ಎಂದು ಹೇಳಿ ಕಳುಹಿಸಿದನು.


ಊರುಬಾಗಲನ್ನು ಮುಚ್ಚುವ ಹೊತ್ತಿನಲ್ಲಿ ಕತ್ತಲೊಳಗೆ ಹೊರಟುಹೋದರು. ಎಲ್ಲಿಗೆ ಹೋದರೆಂಬದೂ ಗೊತ್ತಿಲ್ಲ. ಬೇಗನೆ ಅವರನ್ನು ಬೆನ್ನಟ್ಟಿರಿ; ನಿಮಗೆ ಸಿಕ್ಕಾರು ಎಂದು ಹೇಳಿದಳು.


ಇದೂ ಇದರಲ್ಲಿರುವದೆಲ್ಲವೂ ಕೇವಲ ಯೆಹೋವನ ಸೊತ್ತೇ ಎಂದು ತಿಳಿಯಿರಿ. ಸೂಳೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ; ನಾವು ಕಳುಹಿಸಿದ ದೂತರನ್ನು ಅವಳು ಅಡಗಿಸಿಟ್ಟಳಲ್ಲಾ.


ಸೂಳೆಯಾದ ರಾಹಾಬಳು ಯೆರಿಕೋ ಪಟ್ಟಣವನ್ನು ಸಂಚರಿಸಿನೋಡುವದಕ್ಕೆ ಬಂದಿದ್ದ ಯೆಹೋಶುವನ ದೂತರನ್ನು ಅಡಗಿಸಿಟ್ಟದರಿಂದ ಅವನು ಅವಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿರುವದೆಲ್ಲವನ್ನೂ ಉಳಿಸಿದನು. ಅವಳು ಇಂದಿನವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು