Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:6 - ಕನ್ನಡ ಸತ್ಯವೇದವು J.V. (BSI)

6 ಆದರೆ ಅವಳು ಆ ಮನುಷ್ಯರನ್ನು ಮಾಳಿಗೆಯ ಮೇಲೆ ಹತ್ತಿಸಿ ಅಲ್ಲಿ ಸಾಲಾಗಿ ಇಟ್ಟಿದ್ದ ಪುಂಡಿಯ ಹೊರೆಗಳಲ್ಲಿ ಅಡಗಿಸಿಟ್ಟಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಅವಳು ಆ ಮನುಷ್ಯರನ್ನು ಮಾಳಿಗೆಯ ಮೇಲೆ ಹತ್ತಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನ ಹೊರೆಗಳ ಮಧ್ಯದಲ್ಲಿ ಬಚ್ಚಿಟ್ಟಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಅವಳು ಆ ವ್ಯಕ್ತಿಗಳನ್ನು ಮಾಳಿಗೆಯ ಮೇಲೆ ಹತ್ತಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನ ಹೊರೆಗಳೊಳಗೆ ಬಚ್ಚಿಟ್ಟಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಅವಳು ನಿಜವಾಗಿ ಆ ಗೂಢಚಾರರನ್ನು ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಒಟ್ಟಿದ ಹುಲ್ಲಿನಲ್ಲಿ ಅವರನ್ನು ಅಡಗಿಸಿಟ್ಟಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಆಕೆಯು ಅವರನ್ನು ಮಾಳಿಗೆಯ ಮೇಲೆ ಏರಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನೊಳಗೆ ಬಚ್ಚಿಟ್ಟಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:6
17 ತಿಳಿವುಗಳ ಹೋಲಿಕೆ  

ಅದೇ ರೀತಿಯಾಗಿ ಸೂಳೆಯಾದ ರಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿವಂತಳೆಂಬ ನಿರ್ಣಯವನ್ನು ಹೊಂದಿದಳಲ್ಲವೇ.


ಮೋಶೆ ಹುಟ್ಟಿದಾಗ ಅವನ ತಂದೆ ತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.


ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.


ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ ಗೋದಿಯ ನುಚ್ಚನ್ನು ಹರವಿದಳು. ಆದದರಿಂದ ಸಂಗತಿಯು ಯಾರಿಗೂ ಗೊತ್ತಾಗಲಿಲ್ಲ.


ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವದನ್ನು ತೆಗೆದುಕೊಳ್ಳುವದಕ್ಕೆ ಇಳಿಯದೆ,


ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನೂ ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.


ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಹತವಾಗುವದಕ್ಕಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು.


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾವಿುಯಾದ ನಿನಗೆ ತಿಳಿಸಲ್ಪಡಲಿಲ್ಲವೋ? ಅವರಲ್ಲಿ ನೂರು ಮಂದಿಯನ್ನು ತೆಗೆದುಕೊಂಡು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅನ್ನಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.


(ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹುಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರುಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಅವನು ಒಂದು ದಿವಸ ಸಂಜೇ ಹೊತ್ತಿನಲ್ಲಿ ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿರುವಾಗ ಅಲ್ಲಿಂದ ಬಹುಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವದನ್ನು ಕಂಡನು.


ಆ ಮನುಷ್ಯರಿಬ್ಬರೂ ಮಲಗಿಕೊಳ್ಳುವ ಮೊದಲು


ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.


ಆಕೆ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು ಅದು ಚೆಲುವಾದ ಕೂಸೆಂದು ತಿಳಿದು ಮೂರು ತಿಂಗಳು ಬಚ್ಚಿಟ್ಟಳು.


ಊರುಬಾಗಲನ್ನು ಮುಚ್ಚುವ ಹೊತ್ತಿನಲ್ಲಿ ಕತ್ತಲೊಳಗೆ ಹೊರಟುಹೋದರು. ಎಲ್ಲಿಗೆ ಹೋದರೆಂಬದೂ ಗೊತ್ತಿಲ್ಲ. ಬೇಗನೆ ಅವರನ್ನು ಬೆನ್ನಟ್ಟಿರಿ; ನಿಮಗೆ ಸಿಕ್ಕಾರು ಎಂದು ಹೇಳಿದಳು.


ಅರಸನ ಆಳುಗಳು ಯೊರ್ದನಿನ ದಾರಿಹಿಡಿದು ಹೋಗಿ ಹೊಳೆದಾಟುವ ಸ್ಥಳಗಳವರೆಗೂ ಹುಡುಕಿದರು. ಹುಡುಕುವವರು ಹೊರಟ ಕೂಡಲೆ ಊರುಬಾಗಲನ್ನು ಮುಚ್ಚಿದರು.


ಸೂಳೆಯಾದ ರಾಹಾಬಳು ಯೆರಿಕೋ ಪಟ್ಟಣವನ್ನು ಸಂಚರಿಸಿನೋಡುವದಕ್ಕೆ ಬಂದಿದ್ದ ಯೆಹೋಶುವನ ದೂತರನ್ನು ಅಡಗಿಸಿಟ್ಟದರಿಂದ ಅವನು ಅವಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿರುವದೆಲ್ಲವನ್ನೂ ಉಳಿಸಿದನು. ಅವಳು ಇಂದಿನವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು