ಯೆಹೋಶುವ 21:11 - ಕನ್ನಡ ಸತ್ಯವೇದವು J.V. (BSI)11 ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯತರ್ಬವಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯಾತ ಅರ್ಬ ಎಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ) ಅದರ ಸುತ್ತಲಿರುವ ಉಪನಗರಗಳನ್ನೂ ಅವರಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇವುಗಳಲ್ಲಿ ಯೆಹೂದ ಮಲೆನಾಡಿನ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯತರ್ಬ ಎಂದರೆ ಅನಾಕನ ತಂದೆಯಾದ ಅರ್ಬನನಗರ). ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವರಿಗೆ ಹೆಬ್ರೋನ್ ಎಂಬ ಕಿರ್ಯತರ್ಬನಗರ (ಇದಕ್ಕೆ ಅನಾಕನ ತಂದೆಯಾದ ಅರ್ಬನ ಹೆಸರಿಡಲಾಗಿತ್ತು.) ಮತ್ತು ಅವರ ಪಶುಗಳಿಗಾಗಿ ಆ ನಗರದ ಹತ್ತಿರದ ಸ್ವಲ್ಪ ಭೂಮಿಯನ್ನು ಕೊಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೂದದ ಬೆಟ್ಟಗಳಲ್ಲಿರುವ ಅನಾಕನ ಪಿತೃವಾದ ಕಿರ್ಯತ್ ಅರ್ಬನ ಹೆಸರಿದ್ದ ಪಟ್ಟಣವಾದ ಹೆಬ್ರೋನನ್ನೂ, ಅದರ ಸುತ್ತಲಿರುವ ಗೋಮಾಳಗಳನ್ನೂ ಅವರಿಗೆ ಕೊಟ್ಟರು. ಅಧ್ಯಾಯವನ್ನು ನೋಡಿ |