Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:41 - ಕನ್ನಡ ಸತ್ಯವೇದವು J.V. (BSI)

41 ಲೇವಿಯರಿಗೆ ಇಸ್ರಾಯೇಲ್ಯರ ಮಧ್ಯದಲ್ಲಿ ದೊರಕಿದ ಗೋಮಾಳಸಹಿತವಾದ ಪಟ್ಟಣಗಳು ನಾಲ್ವತ್ತೆಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಲೇವಿಯರಿಗೆ ಇಸ್ರಾಯೇಲರ ಮಧ್ಯದಲ್ಲಿ ದೊರಕಿದ ಗೋಮಾಳ ಸಹಿತವಾದ ಪಟ್ಟಣಗಳು ನಲವತ್ತೆಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಲೇವಿಯರಿಗೆ ಇಸ್ರಯೇಲರ ನಡುವೆ ದೊರಕಿದ ಗೋಮಾಳ ಸಹಿತವಾದ ನಗರಗಳು ಒಟ್ಟು ನಾಲ್ವತ್ತೆಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಹೀಗೆ ಲೇವಿಯರು ಒಟ್ಟಿನಲ್ಲಿ ನಲವತ್ತೆಂಟು ಪಟ್ಟಣಗಳನ್ನು ಮತ್ತು ತಮ್ಮ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಪಡೆದರು. ಈ ಎಲ್ಲ ಪಟ್ಟಣಗಳು ಬೇರೆ ಕುಲದವರ ಪ್ರದೇಶಗಳಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಇಸ್ರಾಯೇಲರ ನಡುವೆ ಲೇವಿಯರಿಗೆ ಒಟ್ಟು ನಾಲ್ವತ್ತೆಂಟು ಪಟ್ಟಣಗಳು ಅವುಗಳ ಗೋಮಾಳ ಸಹಿತವಾಗಿ ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:41
7 ತಿಳಿವುಗಳ ಹೋಲಿಕೆ  

ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲ್ಯರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.


ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅದಕ್ಕೆ ಶಾಪವುಂಟಾಗಲಿ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು; ಇಸ್ರಾಯೇಲ್ಯರಲ್ಲಿ ಅವರನ್ನು ಚದರಿಸುವೆನು.


ವಿುಕ್ಕ ಲೇವಿಯರಾದ ಮೇರಾರೀಗೋತ್ರಗಳಿಗೆ ಚೀಟಿನಿಂದ ದೊರಕಿದ ಪಟ್ಟಣಗಳು ಹನ್ನೆರಡು.


ಆ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಗೋಮಾಳವಿರುವದು. ಎಲ್ಲಾ ಪಟ್ಟಣಗಳಿಗೂ ಹೀಗೆಯೇ.


ಇಸ್ರಾಯೇಲ್ಯರು ಲೇವಿಯರಿಗೆ ಆ ಪಟ್ಟಣಗಳನ್ನಲ್ಲದೆ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.


ಅವರು ಯೆಹೋವನ ಆಜ್ಞೆಯಂತೆ ಅವರಿಗೆ ತಮ್ಮ ಸ್ವಾಸ್ತ್ಯದಿಂದ ಕೆಳಗೆ ಬರೆದಷ್ಟು ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟುಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು