ಯೆಹೋಶುವ 21:43 - ಕನ್ನಡ ಸತ್ಯವೇದವು J.V. (BSI)43 ಯೆಹೋವನು ಇಸ್ರಾಯೇಲ್ಯರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲ್ಯರಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಿಸಿಕೊಂಡು ಅದರಲ್ಲಿ ವಾಸಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಸರ್ವೇಶ್ವರಸ್ವಾಮಿ ಇಸ್ರಯೇಲರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಹೀಗೆ ಅವರಿಗೆ ಕೊಟ್ಟರು. ಇಸ್ರಯೇಲರು ಅದನ್ನು ವಶಪಡಿಸಿಕೊಂಡು ಅದರಲ್ಲಿ ವಾಸಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಹೀಗೆ ಯೆಹೋವನು ಇಸ್ರೇಲರಿಗೆ ಮಾಡಿದ ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದನು. ಆತನು ಅವರಿಗೆ ವಾಗ್ದಾನ ಮಾಡಿದ ದೇಶವನ್ನು ಕೊಟ್ಟನು. ಅವರು ಅದನ್ನು ಹಂಚಿಕೊಂಡು ವಾಸವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಈ ರೀತಿಯಾಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುವೆನೆಂದು ಆಣೆಯಿಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟರು. ಇಸ್ರಾಯೇಲರು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |