Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:6 - ಕನ್ನಡ ಸತ್ಯವೇದವು J.V. (BSI)

6 ತಿರಿಗಿ ಚೀಟುಹಾಕುವಲ್ಲಿ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದಲೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧಕುಲದಿಂದಲೂ ಹದಿಮೂರು ಪಟ್ಟಣಗಳು ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪುನಃ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದಲೂ ಹದಿಮೂರು ಪಟ್ಟಣಗಳು ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮತ್ತೆ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದ ಹದಿಮೂರು ನಗರಗಳು ದೊರೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಗೇರ್ಷೋನ್ಯ ಗೋತ್ರದವರಿಗೆ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು. ಈ ಪಟ್ಟಣಗಳು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧಕುಲದವರಿಗೆ ಸೇರಿದ ಪ್ರದೇಶಗಳಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಗೇರ್ಷೋನ್ಯರಿಗೆ ಇಸ್ಸಾಕಾರನ ಗೋತ್ರದಲ್ಲಿಯೂ, ಆಶೇರನ ಗೋತ್ರದಲ್ಲಿಯೂ, ನಫ್ತಾಲಿಯ ಗೋತ್ರದಲ್ಲಿಯೂ, ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ಚೀಟಿಯಿಂದ ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:6
8 ತಿಳಿವುಗಳ ಹೋಲಿಕೆ  

ಗೇರ್ಷೋಮ್ಯರ ಕುಟುಂಬಗಳಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ, ಬಾಷಾನಿನಲ್ಲಿರುವ ಅರ್ಧಮನಸ್ಸೆ ಈ ಕುಲಗಳ ಸ್ವಾಸ್ತ್ಯದಿಂದ ಹದಿಮೂರು ಪಟ್ಟಣಗಳು ದೊರಕಿದವು.


ವಿುಕ್ಕ ಕೆಹಾತ್ಯರಿಗೆ ಎಫ್ರಾಯೀಮ್ ದಾನ್ ಕುಲಗಳಿಂದಲೂ ಮನಸ್ಸೆಯ ಅರ್ಧಕುಲದಿಂದಲೂ ಹತ್ತು ಪಟ್ಟಣಗಳು ಸಿಕ್ಕಿದವು.


ಮೆರಾರೀ ಗೋತ್ರದವರಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳಿಂದ ಹನ್ನೆರಡು ಪಟ್ಟಣಗಳು ಸಿಕ್ಕಿದವು.


ಆದರೆ ಅದರ ಹೊಲಗಳನ್ನೂ ಅದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು