Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:8 - ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಚೀಟುಹಾಕಿ ಲೇವಿಯರಿಗೆ ಇಷ್ಟು ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಇಸ್ರಾಯೇಲರು ಚೀಟು ಹಾಕಿ ಲೇವಿಯರಿಗೆ ಇಷ್ಟು ಪಟ್ಟಣಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರ ಸ್ವಾಮಿ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ಇಸ್ರಯೇಲರು ಚೀಟು ಹಾಕಿ ಲೇವಿಯರಿಗೆ ಇಷ್ಟು ನಗರಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹೀಗೆ ಇಸ್ರೇಲರು ಲೇವಿಯರಿಗೆ ಈ ಪಟ್ಟಣಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ಕೊಟ್ಟರು; ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಯನ್ನು ಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗೋಮಾಳಗಳನ್ನೂ ಇಸ್ರಾಯೇಲರು ಯೆಹೋವ ದೇವರು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ, ಲೇವಿಯರಿಗೆ ಚೀಟು ಹಾಕಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:8
11 ತಿಳಿವುಗಳ ಹೋಲಿಕೆ  

ಅವರು ಯೆಹೋವನ ಆಜ್ಞೆಯಂತೆ ಅವರಿಗೆ ತಮ್ಮ ಸ್ವಾಸ್ತ್ಯದಿಂದ ಕೆಳಗೆ ಬರೆದಷ್ಟು ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟುಬಿಟ್ಟರು.


ಚೀಟುಹಾಕುವದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವದು.


ಉಡಿಯಲ್ಲಿ ಚೀಟು ಹಾಕಬಹುದು; ಅದರ ತೀರ್ಪು ಯೆಹೋವನದೇ.


ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲುಮಾಡಿ ಇಲ್ಲಿ ನನ್ನ ಬಳಿಗೆ ತೆಗೆದುಕೊಂಡು ಬರಲಿ; ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟುಹಾಕುವೆನು.


ಆ ಊರುಗಳು ಲೇವಿಯರ ನಿವಾಸಕ್ಕಾಗಿ, ಸುತ್ತಲಿರುವ ಭೂವಿುಗಳು ಅವರ ದನ ಕುರಿ ಮೊದಲಾದ ಪಶುಗಳಿಗಾಗಿಯೂ ಇರುವವು.


ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.


ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರ್ ಇವರ ಬಳಿಗೂ ಸಮೂಹದ ಪ್ರಧಾನರ ಬಳಿಗೂ ಬಂದು -


ಸಿಮೆಯೋನನೂ ಲೇವಿಯೂ ಅಣ್ಣತಮ್ಮಂದಿರೇ ಸರಿ; ಇವರ ಕತ್ತಿಗಳು ಬಲಾತ್ಕಾರದ ಆಯುಧಗಳೇ.


ಮೆರಾರೀ ಗೋತ್ರದವರಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳಿಂದ ಹನ್ನೆರಡು ಪಟ್ಟಣಗಳು ಸಿಕ್ಕಿದವು.


ಲೇವಿಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದ್ದದರಿಂದ


ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅದಕ್ಕೆ ಶಾಪವುಂಟಾಗಲಿ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು; ಇಸ್ರಾಯೇಲ್ಯರಲ್ಲಿ ಅವರನ್ನು ಚದರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು