Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:11 - ಕನ್ನಡ ಸತ್ಯವೇದವು J.V. (BSI)

11 ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಇಸ್ರಾಯೇಲ್‍ದೇಶವಾದ ಕಾನಾನಿನ ಪೂರ್ವಕ್ಕಿರುವ ಯೊರ್ದನ್‍ಹೊಳೆಯ ತೀರಪ್ರದೇಶದಲ್ಲಿ ವೇದಿಯನ್ನು ಕಟ್ಟಿದ್ದಾರೆಂಬ ವರ್ತಮಾನವು ವಿುಕ್ಕ ಇಸ್ರಾಯೇಲ್ಯರಿಗೆ ಮುಟ್ಟಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಜನರು ಇಸ್ರಾಯೇಲ ದೇಶವಾದ ಕಾನಾನಿನ ಪೂರ್ವಕ್ಕಿರುವ ಯೊರ್ದನ್ ನದಿಯ ತೀರಪ್ರದೇಶದಲ್ಲಿ ಯಜ್ಞವೇದಿಯನ್ನು ಕಟ್ಟಿದ್ದಾರೆಂಬ ವರ್ತಮಾನವು ಮಿಕ್ಕ ಇಸ್ರಾಯೇಲರಿಗೂ ತಿಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ರೂಬೇನ್ಯರು, ಗಾದ್ಯರು ಹಾಗು ಮನಸ್ಸೆಕುಲದ ಅರ್ಧಜನರು ಇಸ್ರಯೇಲ್ ನಾಡಾದ ಕಾನಾನಿನ ಪೂರ್ವಕ್ಕಿರುವ ಜೋರ್ಡನ್ ನದಿಯ ತೀರಪ್ರದೇಶದಲ್ಲಿ ಬಲಿಪೀಠವನ್ನು ಕಟ್ಟಿದ್ದಾರೆಂಬ ಸುದ್ದಿ ಮಿಕ್ಕ ಇಸ್ರಯೇಲರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇನ್ನೂ ಶೀಲೋವಿನಲ್ಲಿದ್ದ ಇಸ್ರೇಲಿನ ಉಳಿದ ಜನರು, ಈ ಮೂರು ಕುಲದವರು ಕಟ್ಟಿಸಿದ ಯಜ್ಞವೇದಿಕೆಯ ಬಗ್ಗೆ ಕೇಳಿದರು. ಕಾನಾನಿನ ಗಡಿಯ ಬಳಿಯಿರುವ ಗೆಲಿಲೋತ್ ಎಂಬಲ್ಲಿ ಇದನ್ನು ಕಟ್ಟಲಾಗಿದೆ ಎಂಬುದು ಅವರಿಗೆ ತಿಳಿಯಿತು. ಇದು ಇಸ್ರೇಲರಿಗೆ ಸೇರಿದ ಜೋರ್ಡನ್ ನದಿಯ ಸಮೀಪದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲರು ದಾಟಿಬಂದ ಯೊರ್ದನ್ ನದಿ ಪ್ರಾಂತದಲ್ಲಿ ಬಲಿಪೀಠವನ್ನು ಕಟ್ಟಿದರೆಂಬ ಸುದ್ದಿ ಇಸ್ರಾಯೇಲರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:11
13 ತಿಳಿವುಗಳ ಹೋಲಿಕೆ  

ಇದೆಲ್ಲಾ ಯೊರ್ದನ್ ಹೊಳೆಯ ಆಚೇಕಡೆಯಲ್ಲಿರುವ ಬೇಥಾನ್ಯದಲ್ಲಿ ನಡೆಯಿತು. ಅಲ್ಲಿ ಯೋಹಾನನು ಸ್ನಾನ ಕೊಡುತ್ತಿದ್ದನು.


ಅರಸನ ಆಳುಗಳು ಯೊರ್ದನಿನ ದಾರಿಹಿಡಿದು ಹೋಗಿ ಹೊಳೆದಾಟುವ ಸ್ಥಳಗಳವರೆಗೂ ಹುಡುಕಿದರು. ಹುಡುಕುವವರು ಹೊರಟ ಕೂಡಲೆ ಊರುಬಾಗಲನ್ನು ಮುಚ್ಚಿದರು.


ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬೆಳ್ಳಗಿರುವ ವಸ್ತ್ರಗಳನ್ನು ಹೊದ್ದುಕೊಂಡ ಇಬ್ಬರು ದೇವದೂತರನ್ನು ಕಂಡಳು; ಅವರಲ್ಲಿ ಒಬ್ಬನು ತಲೆಯಿದ್ದ ಕಡೆಯಲ್ಲಿ ಒಬ್ಬನು ಕಾಲಿದ್ದ ಕಡೆಯಲ್ಲಿ ಕೂತಿದ್ದರು.


ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಮುಂಜಾನೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ತೆಗೆದಿರುವದನ್ನು ಕಂಡಳು.


ಇದಲ್ಲದೆ ಅವರು ಎಫ್ರಾಯೀವಿುಗೆ ಹೋಗುವ ಯೊರ್ದನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಾಯೀಮ್ಯರಲ್ಲೊಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದರೆ ಅವರು - ನೀನು ಎಫ್ರಾಯೀಮ್ಯನೋ ಎಂದು ಕೇಳುವರು.


ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಕಾನಾನ್ ದೇಶದಲ್ಲಿರುವ ಯೊರ್ದನ್ ತೀರ ಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ಮಹಾವೇದಿಯನ್ನು ಕಟ್ಟಿದರು.


ಯೆಹೋವನ ಸರ್ವಸಭೆಯ ಮಾತನ್ನು ಕೇಳಿರಿ - ನೀವು ಇಸ್ರಾಯೇಲ್ ದೇವರಿಗೆ ವಿರುದ್ಧವಾಗಿ ಇಂಥ ದ್ರೋಹ ಮಾಡಿದ್ದೇಕೆ? ನಿಮಗೋಸ್ಕರ ವೇದಿಯನ್ನು ಕಟ್ಟಿಕೊಂಡದರಿಂದ ನೀವು ಯೆಹೋವನಿಗೆ ವಿಮುಖರಾದ ಹಾಗಾಯಿತಲ್ಲವೇ. ನೀವು ಈ ಹೊತ್ತು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದಂತಾಯಿತು.


ನಿಮ್ಮ ದೇಶವು ಅಶುದ್ಧವಾಗಿದೆಯೆಂದು ತೋರಿದರೆ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿ ಸ್ವಾಸ್ತ್ಯವನ್ನು ತೆಗೆದುಕೊಳ್ಳಿರಿ. ನಮ್ಮ ದೇವರಾದ ಯೆಹೋವನ ವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ ಬೆಳೆಯ ದಶಮಾಂಶಗಳನ್ನೂ ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು