Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:26 - ಕನ್ನಡ ಸತ್ಯವೇದವು J.V. (BSI)

26 ಬನ್ನಿರಿ, ಒಂದು ವೇದಿಯನ್ನು ಕಟ್ಟೋಣ ಎಂದುಕೊಂಡು ಹಾಗೆಯೇ ಮಾಡಿದೆವು. ಅದು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವದಕ್ಕೋಸ್ಕರವಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಈ ಕಾರಣದಿಂದಲೇ, ‘ಬನ್ನಿ, ಒಂದು ಯಜ್ಞವೇದಿಯನ್ನು ಕಟ್ಟೋಣ. ಅದು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕಲ್ಲ,’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಈ ಕಾರಣದಿಂದಲೇ, ‘ಬನ್ನಿ, ಒಂದು ಬಲಿಪೀಠವನ್ನು ಕಟ್ಟೋಣ, ಅದು ದಹನಬಲಿ ಅಥವಾ ಬೇರೆ ಬಲಿಗಳನ್ನು ಸಮರ್ಪಿಸುವುದಕ್ಕಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಅದಕ್ಕಾಗಿ ಈ ಯಜ್ಞವೇದಿಕೆಯನ್ನು ಕಟ್ಟಲು ನಾವು ನಿರ್ಧರಿಸಿದೆವು. ಆದರೆ ಅದನ್ನು ಸರ್ವಾಂಗಹೋಮಗಳಿಗಾಗಲಿ ಯಜ್ಞಗಳಿಗಾಗಲಿ ಬಳಸಲು ಕಟ್ಟಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಆದ್ದರಿಂದ, ‘ನಾವು ಸಿದ್ಧರಾಗಿ ಬಲಿಪೀಠವನ್ನು ಕಟ್ಟೋಣ ಎಂದು ಹೇಳಿದ ಕಾರಣ, ದಹನಬಲಿ ಅಥವಾ ಬೇರೆ ಬಲಿಗಳನ್ನು ಸಮರ್ಪಿಸುವುದಕ್ಕೆ ಅಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:26
5 ತಿಳಿವುಗಳ ಹೋಲಿಕೆ  

ರೂಬೇನ್ಯರೇ, ಗಾದ್ಯರೇ, ಯೆಹೋವನು ನಮಗೂ ನಿಮಗೂ ನಡುವೆ ಯೊರ್ದನ್ ಹೊಳೆಯನ್ನು ಮೇರೆಯಾಗಿಟ್ಟಿದ್ದಾನೆ. ಆತನಲ್ಲಿ ನಿಮಗೇನೂ ಪಾಲಿಲ್ಲ ಎಂದು ಹೇಳಿ ಅವರನ್ನು ದೇವಭಕ್ತಿಯಿಂದ ತೊಲಗಿಸಿ ಬಿಟ್ಟಾರು ಎಂಬ ಭಯದಿಂದ ನಾವು -


ಆದರೆ ಯೆಹೋವನ ಸಾನ್ನಿಧ್ಯದಲ್ಲಿ ಸರ್ವಾಂಗಹೋಮಯಜ್ಞ, ಸಮಾಧಾನಯಜ್ಞ ಮೊದಲಾದವುಗಳನ್ನು ಸಮರ್ಪಿಸಿ ಆರಾಧಿಸುವದಕ್ಕೆ ನಮಗೂ ಹಕ್ಕುಂಟೆಂಬದಕ್ಕೆ ಇದು ನಮಗೂ ನಿಮಗೂ ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಸಾಕ್ಷಿಯಾಗಿರುವದು. ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ - ಯೆಹೋವನಲ್ಲಿ ನಿಮಗೆ ಪಾಲಿಲ್ಲವೆಂದು ಹೇಳುವದಕ್ಕೆ ಆಸ್ಪದವಿಲ್ಲ.


ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಯೆಹೋವನಿಗೆ ಒಂದು ಯಜ್ಞಪೀಠವೂ ದೇಶದ ಎಲ್ಲೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವವು.


ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ ಮೊದಲಾದವುಗಳನ್ನು ಸಮರ್ಪಿಸುವದಕ್ಕೋಸ್ಕರ ಬೇರೊಂದು ವೇದಿಯನ್ನು ಕಟ್ಟಿ ಯೆಹೋವನಿಗೆ ವಿಮುಖರಾಗಿ ದ್ರೋಹಿಗಳಾಗುವದು ನಮಗೆ ದೂರವಾಗಿರಲಿ ಅಂದರು.


ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು