ಯೆಹೋಶುವ 22:27 - ಕನ್ನಡ ಸತ್ಯವೇದವು J.V. (BSI)27 ಆದರೆ ಯೆಹೋವನ ಸಾನ್ನಿಧ್ಯದಲ್ಲಿ ಸರ್ವಾಂಗಹೋಮಯಜ್ಞ, ಸಮಾಧಾನಯಜ್ಞ ಮೊದಲಾದವುಗಳನ್ನು ಸಮರ್ಪಿಸಿ ಆರಾಧಿಸುವದಕ್ಕೆ ನಮಗೂ ಹಕ್ಕುಂಟೆಂಬದಕ್ಕೆ ಇದು ನಮಗೂ ನಿಮಗೂ ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಸಾಕ್ಷಿಯಾಗಿರುವದು. ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ - ಯೆಹೋವನಲ್ಲಿ ನಿಮಗೆ ಪಾಲಿಲ್ಲವೆಂದು ಹೇಳುವದಕ್ಕೆ ಆಸ್ಪದವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದರೆ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಯಜ್ಞ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸಿ ಆರಾಧಿಸುವುದಕ್ಕೋಸ್ಕರ ನಮಗೂ ಹಕ್ಕಿದೆ ಎಂಬುದಕ್ಕೆ ಇದು ನಮಗೂ, ನಿಮಗೂ, ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಸಾಕ್ಷಿಯಾಗಿರುವುದು. ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ ಯೆಹೋವನಲ್ಲಿ ನಿಮಗೆ ಪಾಲಿಲ್ಲವೆಂದು ಹೇಳುವುದಕ್ಕೆ ಆಸ್ಪದವಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆದರೆ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿ, ಸಮರ್ಪಣಬಲಿ, ಶಾಂತಿಸಮಾಧಾನದ ಬಲಿ ಮುಂತಾದುವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಹಕ್ಕು ಉಂಟೆಂಬುದಕ್ಕೆ ಇದು ಗುರುತಾಗಿರಲಿ. ನಮಗೂ ನಿಮಗೂ ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಇದು ಸಾಕ್ಷಿಯಾಗಿರಲಿ.’ ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಸರ್ವೇಶ್ವರನಲ್ಲಿ ನಿಮಗೆ ಪಾಲಿಲ್ಲ’ ಎಂದು ಹೇಳುವುದಕ್ಕೆ ಆಸ್ಪದವಿರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನೀವು ಆರಾಧಿಸುವ ದೇವರನ್ನೇ ನಾವೂ ಆರಾಧಿಸುತ್ತೇವೆಂಬುದನ್ನು ನಮ್ಮ ಜನರಿಗೆ ತೋರಿಸಿಕೊಡುವುದೇ ಈ ಯಜ್ಞವೇದಿಕೆಯ ನಿಜವಾದ ಉದ್ದೇಶವಾಗಿದೆ. ನಾವು ಯೆಹೋವನನ್ನು ಆರಾಧಿಸುತ್ತೇವೆ. ನಾವು ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯೆಹೋವನ ಸಾನ್ನಿಧ್ಯದಲ್ಲಿ ಸಮರ್ಪಿಸುತ್ತೇವೆ ಎಂಬುದಕ್ಕೆ ಈ ಯಜ್ಞವೇದಿಕೆಯು ನಿಮಗೂ ನಮಗೂ ಮತ್ತು ನಮ್ಮ ಮುಂದಿನ ಪೀಳಿಗೆಗಳಿಗೂ ಸಾಕ್ಷಿಯಾಗಿರುತ್ತದೆ. ನಾವು ಸಹ ನಿಮ್ಮಂತೆಯೇ ಇಸ್ರೇಲಿನ ಜನರೆಂಬುದನ್ನು ದೊಡ್ಡವರಾದ ಮೇಲೆ ನಿಮ್ಮ ಮಕ್ಕಳಿಗೆ ತಿಳಿದಿರಲಿ ಎಂಬುದು ನಮ್ಮ ಇಚ್ಛೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿಯವರಿಗೂ ಮಧ್ಯದಲ್ಲಿ ಒಂದು ಸಾಕ್ಷಿ ಉಂಟಾಗಿರುವಂತೆಯೂ ನಾವು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿ, ಸಮಾಧಾನದ ಬಲಿ ಮುಂತಾದವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಗುರುತಾಗಿರುವಂತೆಯೂ, ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಯೆಹೋವ ದೇವರಲ್ಲಿ ನಿಮಗೆ ಭಾಗವಿಲ್ಲ,’ ಎಂದು ಹೇಳದೆ ಇರುವಂತೆಯೂ ಸಾಕ್ಷಿಗಾಗಿ ಕಟ್ಟಿದ್ದೇವೆ ಅಷ್ಟೇ. ಅಧ್ಯಾಯವನ್ನು ನೋಡಿ |