ಯೆಹೋಶುವ 22:31 - ಕನ್ನಡ ಸತ್ಯವೇದವು J.V. (BSI)31 ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನು ರೂಬೇನ್ ಗಾದ್ ಮನಸ್ಸೆಕುಲಗಳವರಿಗೆ - ನೀವು ಯೆಹೋವನಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದದರಿಂದ ಆತನು ನಮ್ಮ ಮಧ್ಯದಲ್ಲಿರುತ್ತಾನೆಂದು ಈಗ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲ್ಯರನ್ನು ಯೆಹೋವನ ಶಿಕ್ಷಾಹಸ್ತಕ್ಕೆ ತಪ್ಪಿಸಿದ್ದೀರಿ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು ರೂಬೇನ್, ಗಾದ್, ಮನಸ್ಸೆ ಕುಲಗಳವರಿಗೆ “ನೀವು ಯೆಹೋವನಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಆತನು ನಮ್ಮ ಮಧ್ಯದಲ್ಲಿದ್ದಾನೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವನ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಯಾಜಕ ಎಲ್ಲಾಜಾರನ ಮಗ ಫೀನೆಹಾಸನು ರೂಬೇನ್, ಗಾದ್, ಮನಸ್ಸೆ ಕುಲಗಳವರಿಗೆ, “ಸರ್ವೇಶ್ವರ ನಿಮ್ಮ ಮಧ್ಯೆ ಇರುತ್ತಾರೆಂದು ಈಗ ಅರಿವಾಯಿತು. ನೀವು ಸರ್ವೇಶ್ವರಸ್ವಾಮಿಗೆ ವಿರುದ್ಧ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಇಸ್ರಯೇಲರನ್ನು ಆತನ ಶಿಕ್ಷಾಹಸ್ತದಿಂದ ತಪ್ಪಿಸಿದಿರಿ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆಗ ಯಾಜಕನಾದ ಫೀನೆಹಾಸನು ಈ ಕುಲಗಳವರಿಗೆ, “ಯೆಹೋವನು ನಮ್ಮೊಂದಿಗಿದ್ದಾನೆಂಬುದು ಮತ್ತು ನೀವು ಆತನಿಗೆ ವಿರೋಧಿಗಳಾಗಿಲ್ಲವೆಂಬುದು ಈಗ ನಮಗೆ ತಿಳಿಯಿತು. ಯೆಹೋವನು ಇಸ್ರೇಲರನ್ನು ಶಿಕ್ಷಿಸುವುದಿಲ್ಲವೆಂದು ನಮಗೆ ಸಂತೋಷವಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಯಾಜಕನಾಗಿರುವ ಎಲಿಯಾಜರನ ಪುತ್ರ ಫೀನೆಹಾಸನು ರೂಬೇನ್, ಗಾದ್ ಹಾಗೂ ಮನಸ್ಸೆಯ ಗೋತ್ರದವರಿಗೆ, “ನೀವು ಯೆಹೋವ ದೇವರಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಅವರು ನಮ್ಮ ಮಧ್ಯದಲ್ಲಿರುತ್ತಾರೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವ ದೇವರ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ,” ಎಂದನು. ಅಧ್ಯಾಯವನ್ನು ನೋಡಿ |