Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:4 - ಕನ್ನಡ ಸತ್ಯವೇದವು J.V. (BSI)

4 ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿದ್ದದರಿಂದ ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟ ಸ್ವಾಸ್ತ್ಯದಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ತಮ್ಮ ವಾಗ್ದಾನಕ್ಕನುಸಾರ ನಿಮ್ಮ ಸಹೋದರರಿಗೆ ಈಗ ನೆಮ್ಮದಿಯನ್ನು ದಯಪಾಲಿಸಿದ್ದಾರೆ. ಆದುದರಿಂದ ಸರ್ವೇಶ್ವರನ ದಾಸನಾದ ಮೋಶೆ ಜೋರ್ಡನಿನ ಆಚೆಕಡೆ ನಿಮಗೆ ಕೊಟ್ಟ ಆಸ್ತಿಯನ್ನು ಅನುಭವಿಸುತ್ತಿರುವ ನಿಮ್ಮ ನಿಮ್ಮ ನಿವಾಸಿಗಳ ಬಳಿಗೆ ನೀವು ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಮ್ಮ ದೇವರಾದ ಯೆಹೋವನು ಇಸ್ರೇಲರಿಗೆ ಶಾಂತಿಯನ್ನು ದಯಪಾಲಿಸುವುದಾಗಿ ವಾಗ್ದಾನ ಮಾಡಿದ್ದನು. ಈಗ ಯೆಹೋವನು ತನ್ನ ವಾಗ್ದಾನವನ್ನು ಪೂರ್ಣಗೊಳಿಸಿದ್ದಾನೆ. ಆದ್ದರಿಂದ ಈಗ ನೀವು ನಿಮ್ಮ ಮನೆಗಳಿಗೆ ಹೋಗಬಹುದು. ಯೆಹೋವನ ಸೇವಕನಾದ ಮೋಶೆಯು ನಿಮಗೆ ಜೋರ್ಡನ್ ನದಿಯ ಪೂರ್ವಕ್ಕೆ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಈಗ ನೀವು ಆ ಪ್ರದೇಶದಲ್ಲಿರುವ ನಿಮ್ಮ ಮನೆಗಳಿಗೆ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈಗ ನಿಮ್ಮ ದೇವರಾದ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದ ಪ್ರಕಾರ, ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟಿದ್ದಾರೆ. ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಕಡೆ ನಿಮಗೆ ಕೊಟ್ಟ ಸೊತ್ತಿನ ದೇಶದಲ್ಲಿರುವ ನಿಮ್ಮ ನಿವಾಸಗಳಿಗೆ ನೀವು ಹೊರಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:4
16 ತಿಳಿವುಗಳ ಹೋಲಿಕೆ  

ಮನಸ್ಸೆಕುಲದ ಉಳಿದ ಅರ್ಧಜನರಿಗೂ ರೂಬೇನ್ಯರಿಗೂ ಗಾದ್ಯರಿಗೂ ಮೋಶೆಯಿಂದ ಯೊರ್ದನಿನ ಆಚೆಯಲ್ಲೇ ಸ್ವಾಸ್ತ್ಯವು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತಗಳು ಯಾವವಂದರೆ -


ಇಸ್ರಾಯೇಲ್ಯರೆಲ್ಲರೂ ತಮ್ಮತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವ ಪರ್ಯಂತರ ನಾವು ನಮ್ಮ ಮನೆಗಳಿಗೆ ತಿರಿಗಿ ಬರುವದಿಲ್ಲ.


ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವಾಸ್ತ್ಯಕ್ಕೆ ತಿರಿಗಿ ಬರಬಹುದು ಎಂದು ಆಜ್ಞಾಪಿಸಿದೆನು.


ಮೋಶೆಯು ರೂಬೇನ್ಯರ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ಪ್ರದೇಶಗಳು ಯಾವವಂದರೆ -


ನಾವು ಅವರನ್ನು ಸೋಲಿಸಿ ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆ ಕುಲದವರಲ್ಲಿ ಅರ್ಧ ಜನರಿಗೂ ಸ್ವಾಸ್ತ್ಯವಾಗಿ ಕೊಟ್ಟೆವಷ್ಟೆ.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಸ್ವಾಸ್ತ್ಯಕ್ಕೆ ಸೇರಿ ನೀವು ಇನ್ನು ವಿಶ್ರಾಂತಿ ಹೊಂದಲಿಲ್ಲವಲ್ಲಾ.


ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ.


ಅದಕ್ಕೆ ಯೆಹೋವನು - ನಾನೇ ನಿಮ್ಮ ಜೊತೆಯಲ್ಲಿ ಬಂದು ನಿಮಗೆ ವಿಶ್ರಾಂತಿಯನ್ನು ಉಂಟುಮಾಡುವೆನು ಅಂದನು.


ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿಹೊಂದಿದನಂತರ ಯೆಹೋವನ ಸೇವಕನಾದ ಮೋಶೆಯು ನಿಮಗೆ ಯೊರ್ದನ್ ಹೊಳೆಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಬಹುದು ಎಂಬದೇ.


ನಾನು ಆಜ್ಞಾಪಿಸಿದ್ದನ್ನೂ ನೆರವೇರಿಸಿದಿರಿ. ಈ ಕಾಲವೆಲ್ಲಾ ನೀವು ನಿಮ್ಮ ಸಹೋದರರನ್ನು ಕೈಬಿಡಲಿಲ್ಲ. ಈವರೆಗೆ ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸುತ್ತಾ ಬಂದಿದ್ದೀರಿ.


ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನೂ ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಕುಲದ ಅರ್ಧ ಜನರಿಗೂ ಸ್ವಾಸ್ತ್ಯವಾಗಿ ಕೊಟ್ಟನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು