Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:5 - ಕನ್ನಡ ಸತ್ಯವೇದವು J.V. (BSI)

5 ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವಿಧಿಗಳನ್ನು ಜಾಗರೂಕತೆಯಿಂದ ಕೈಕೊಳ್ಳಿರಿ. ಹೀಗಿರಲಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನೇ ಹೊಂದಿಕೊಂಡು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಆತನನ್ನು ಸೇವಿಸಿರಿ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ ಸರ್ವೇಶ್ವರನ ದಾಸ ಮೋಶೆಯು ನಿಮಗೆ ಕೊಟ್ಟ ಧರ್ಮಶಾಸ್ತ್ರವನ್ನೂ ವಿಧಿಗಳನ್ನೂ ಜಾಗರೂಕತೆಯಿಂದ ಕೈಗೊಳ್ಳಿರಿ; ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾರ್ಗದಲ್ಲಿ ನಡೆಯಿರಿ; ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನೇ ನೆಚ್ಚಿಕೊಂಡು ಪೂರ್ಣ ಮನಸ್ಸಿನಿಂದಲೂ ಪೂರ್ಣ ಪ್ರಾಣದಿಂದಲೂ ಅವರಿಗೆ ಸೇವೆ ಸಲ್ಲಿಸಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವನ್ನು ಮತ್ತು ವಿಧಿಗಳನ್ನು ಪಾಲಿಸಬೇಕೆಂಬುದನ್ನು ಜ್ಞಾಪಕದಲ್ಲಿಡಿ. ನೀವು ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನನ್ನು ಅನುಸರಿಸುತ್ತಾ ನಿಮ್ಮಿಂದ ಸಾಧ್ಯವಾದಷ್ಟು ಆತನ ಸೇವೆ ಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆಯನ್ನೂ ನಿಯಮವನ್ನೂ ಜಾಗ್ರತೆಯಾಗಿ ಕೈಗೊಂಡು ನಡೆದು, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನು ಅಂಟಿಕೊಂಡು, ಅವರನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:5
50 ತಿಳಿವುಗಳ ಹೋಲಿಕೆ  

ಆತನು - ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಬುದ್ಧಿಯಿಂದಲೂ ಪ್ರೀತಿಸಬೇಕು


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೋ ಸಾವಿರ ತಲೆಗಳವರೆಗೆ ದಯೆ ತೋರಿಸುವವನಾಗಿಯೂ ಇದ್ದೇನೆ.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ.


ನಾನು ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು ಆತನನ್ನೇ ಹೊಂದಿಕೊಂಡಿದ್ದರೆ


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಸರಿಬೀಳುವದನ್ನು ಮಾಡಿ ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನು.


ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.


ಯೇಸು ಅವನಿಗೆ - ಸೈತಾನನೇ, ನೀನು ತೊಲಗಿ ಹೋಗು. ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಹೇಳಿದನು.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನಕ್ಕೆ ಹೇಸಿಕೊಂಡು ಒಳ್ಳೇದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ನಾನು ಪ್ರಾರ್ಥನೆ ಮಾಡುವಾಗೆಲ್ಲಾ ತಪ್ಪದೆ ನಿಮಗೋಸ್ಕರ ವಿಜ್ಞಾಪನೆಮಾಡಿ ಇನ್ನು ಮೇಲೆಯಾದರೂ ನಿಮ್ಮ ಬಳಿಗೆ ಬರುವದಕ್ಕೆ ದೇವರ ಚಿತ್ತದಿಂದ ನನಗೆ ಹೇಗೂ ಅನುಕೂಲವಾಗಬೇಕೆಂದು ಬೇಡಿಕೊಳ್ಳುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ; ಆತನ ಮಗನ ಸುವಾರ್ತೆಯನ್ನು ಸಾರುತ್ತಾ ಆತನನ್ನೇ ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ.


ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು -


ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.


ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.


ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲ ಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ.


ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ.


ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ರಯಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೇದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.


ಯಾವಾಗಲೂ ನ್ಯಾಯವನ್ನು ಕಾಪಾಡುವವರೂ ನೀತಿಯನ್ನು ಪಾಲಿಸುವವರೂ ಧನ್ಯರು.


ನಾನು ಈಗ ನಿಮಗೆ ಬೋಧಿಸುವ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ


ಆದದರಿಂದ ನಿಮ್ಮ ದೇವರಾದ ಯೆಹೋವನಲ್ಲಿ ಪ್ರೀತಿಯಿಟ್ಟು ಆತನ ನಿಯಮಗಳನ್ನು ಕೈಕೊಂಡು ಆತನ ಆಜ್ಞಾವಿಧಿನಿರ್ಣಯಗಳನ್ನು ಯಾವಾಗಲೂ ಅನುಸರಿಸಬೇಕು.


ನಿಮ್ಮ ದೇವರಾದ ಯೆಹೋವನು ನಿಮಗೆ ನೇವಿುಸಿದ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಲೇಬೇಕು.


ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?


ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ


ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ಹಿಂದೆ ಬರಲಿ; ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನು ಸಹ ಇರುವನು. ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ತಂದೆಯು ಅವನಿಗೆ ಬಹುಮಾನ ಮಾಡುವನು.


ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ; ಅದರೊಳಗಿಂದ ಜೀವಧಾರೆಗಳು ಹೊರಡುವವು.


ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಂಡು ಆತನನ್ನು ಸತ್ಯದಿಂದಲೂ ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;


ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು ಯೆಹೋವನನ್ನು ಅಂಟಿಕೊಂಡು ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.


ಆಗ ಸಮುವೇಲನು ಅವರಿಗೆ - ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರಿಗಿಕೊಂಡಿರುವದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ; ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು ಅಂದನು.


ಈವರೆಗೆ ಹೇಗೋ ಹಾಗೆಯೇ ಇನ್ನು ಮುಂದಕ್ಕೂ ನಿಮ್ಮ ದೇವರಾದ ಯೆಹೋವನನ್ನೇ ಹೊಂದಿಕೊಂಡಿರ್ರಿ.


ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ ಆತನ ಆಜ್ಞೆಗಳನ್ನೇ ಅನುಸರಿಸಿ ಆತನಿಗೇ ವಿಧೇಯರಾಗಿ ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.


ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು ಆತನ ಹೆಸರಿನ ಮೇಲೆಯೇ ಪ್ರಮಾಣ ಮಾಡಬೇಕು.


ಹೀಗಿರುವದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ಇವುಗಳನ್ನು ಕೈಕೊಂಡು ಅನುಸರಿಸಿರಿ. ಅನುಸರಿಸಿದರೇ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ - ಈ ದೊಡ್ಡ ಜನಾಂಗವು ಜ್ಞಾನ ವಿವೇಕವುಳ್ಳ ಜನಾಂಗ ಎಂದು ಮಾತಾಡಿಕೊಳ್ಳುವರು.


ನಿಮ್ಮ ದೇವರಾದ ಯೆಹೋವನನ್ನು ಹೊಂದಿಕೊಂಡವರಾದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ.


ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ ಈಗ ನನ್ನ ಹೆಸರನ್ನೆತ್ತಿ ಯೆಹೋವನ ಜೀವದಾಣೆ ಎಂದು ಪ್ರಮಾಣ ಮಾಡುವ ನನ್ನ ಜನರ ಅಭ್ಯಾಸವನ್ನು ಚೆನ್ನಾಗಿ ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು.


ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ;


ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು; ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮೊಳಗೆ ಯಾವ ವ್ಯಾಧಿಯೂ ಉಂಟಾಗದಂತೆ ಮಾಡುವೆನು;


ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೋ ಸಾವಿರ ತಲೆಗಳವರೆಗೆ ದಯೆತೋರಿಸುವವನಾಗಿಯೂ ಇದ್ದೇನೆ.


ಆಗ ಅವರು ಮೊಂಡರೂ ಅವಿಧೇಯರೂ ಚಪಲಚಿತ್ತರೂ ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತಾಗದೆ


ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಾಗಿ ಕೈಕೊಳ್ಳಬೇಕು. ಬೇರೆ ಯಾವ ದೇವರ ಹೆಸರನ್ನು ಸ್ಮರಿಸಲೂ ಕೂಡದು; ಉಚ್ಚರಿಸಲೂ ಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು