ಯೆಹೋಶುವ 23:3 - ಕನ್ನಡ ಸತ್ಯವೇದವು J.V. (BSI)3 ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಈ ಜನಾಂಗಗಳಿಗೆಲ್ಲಾ ಮಾಡಿದ್ದೆಲ್ಲವನ್ನೂ ನೋಡಿದ್ದೀರಷ್ಟೆ; ಹೌದು, ನಿಮಗಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಯೆಹೋವನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಜನಾಂಗಗಳಿಗೆ ಮಾಡಿದೆಲ್ಲವನ್ನೂ ನೀವೆಲ್ಲರೂ ನೋಡಿದ್ದೀರಷ್ಟೇ. ಹೌದು, ನಿಮಗಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಯೆಹೋವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪರವಾಗಿದ್ದು, ಈ ಜನಾಂಗಗಳಿಗೆ ಮಾಡಿದ್ದೆಲ್ಲವನ್ನು ನೀವು ಕಣ್ಣಾರೆ ನೋಡಿದ್ದೀರಿ. ಹೌದು, ನಿಮ್ಮ ಪರವಾಗಿ ಯುದ್ಧಮಾಡಿದಾತ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನು ನಮ್ಮ ಶತ್ರುಗಳಿಗೆ ಏನು ಮಾಡಿದನೆಂಬುದು ನೀವು ನೋಡಿದ್ದೀರಿ. ನಮಗೆ ಸಹಾಯ ಮಾಡುವುದಕ್ಕಾಗಿ ನಮ್ಮ ದೇವರಾದ ಯೆಹೋವನು ನಮಗಾಗಿ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೋಸ್ಕರ ಈ ಸಕಲ ಜನಾಂಗಗಳಿಗೆ ಮಾಡಿದ ಎಲ್ಲವನ್ನೂ ನೋಡಿದ್ದೀರಿ. ನಿಮಗೋಸ್ಕರವಾಗಿ ಯುದ್ಧ ಮಾಡಿದವರು ನಿಮ್ಮ ದೇವರಾದ ಯೆಹೋವ ದೇವರು. ಅಧ್ಯಾಯವನ್ನು ನೋಡಿ |