Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:4 - ಕನ್ನಡ ಸತ್ಯವೇದವು J.V. (BSI)

4 ನಾನು ಯೊರ್ದನಿನಿಂದ ಪಶ್ಚಿಮ ಮಹಾಸಾಗರದವರೆಗೂ ಇರುವ ಜನಾಂಗಗಳಲ್ಲಿ ಸಂಹೃತರಾದವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಯೊರ್ದನಿನಿಂದ ಪಶ್ಚಿಮದ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವತ್ತಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೋಡಿ, ಜೋರ್ಡನಿನಿಂದ ಪಶ್ಚಿಮ ಮಹಾ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಹಾಗೂ ಉಳಿದವರ ನಾಡನ್ನು ನಿಮಗೆ ಸೊತ್ತಾಗಿ ಕೊಟ್ಟಿದ್ದೇನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪಶ್ಚಿಮದಲ್ಲಿ ಮೆಡಿಟರೇನಿಯನ್ ಸಮುದ್ರವನ್ನು ಮತ್ತು ಜೋರ್ಡನ್ ನದಿಯ ಮಧ್ಯದ ಪ್ರದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳಬಹುದೆಂದು ನಾನು ನಿಮಗೆ ತಿಳಿಸಿದ್ದನ್ನು ಸ್ಮರಿಸಿಕೊಳ್ಳಿ. ನಾನು ಆ ಪ್ರದೇಶವನ್ನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ್ದೆ. ಆದರೆ ಇಲ್ಲಿಯವರೆಗೂ ಅದು ನಿಮ್ಮ ಅಧೀನಕ್ಕೆ ಬಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಯೊರ್ದನ್ ನದಿ ಮೊದಲುಗೊಂಡು ಪಶ್ಚಿಮಕ್ಕಿರುವ ಮೆಡಿಟೆರೆನಿಯನ್ ಸಮುದ್ರದವರೆಗೂ ರಾಷ್ಟ್ರಗಳನ್ನು ಸೋಲಿಸಿ, ಉಳಿದ ಸಕಲ ನಾಡನ್ನು ನಿಮ್ಮ ಗೋತ್ರಗಳಿಗೆ ಸೊತ್ತಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:4
9 ತಿಳಿವುಗಳ ಹೋಲಿಕೆ  

ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟುಹಾಕಿ ದೇಶವನ್ನು ಅವರ ಶಾಖೆಗಳಿಗೆ ಹಂಚಿಕೊಟ್ಟನು.


ಅವು ಯಾವವಂದರೆ - ಐಗುಪ್ತದ ಈಚೆಯಲ್ಲಿರುವ ಶೀಹೋರ್ ಹಳ್ಳ ಮೊದಲುಗೊಂಡು ಕಾನಾನ್ಯರಿಗೆ ಸೇರಿದ್ದ ಉತ್ತರ ಮೇರೆಯಾದ ಎಕ್ರೋನಿನವರೆಗಿದ್ದು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು, ಎಕ್ರೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದಂಥ ಫಿಲಿಷ್ಟಿಯ ಪ್ರಾಂತ್ಯವು,


ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪಸ್ವಲ್ಪವಾಗಿ ಹೊರಡಿಸುತ್ತಿರುವೆನು.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನಾಶಮಾಡಿದ ತರುವಾಯ ನೀವು ಅವರ ದೇಶವನ್ನು ತೆಗೆದುಕೊಂಡು ಅದರಲ್ಲಿ ವಾಸವಾಗಿರುವಾಗ


ಹೀಗಿರುವದರಿಂದ ಯೆಹೋಶುವನು ಸಾಯುವ ಮೊದಲು ಹೊರಡಿಸದೆ ಬಿಟ್ಟ ಜನಾಂಗಗಳಲ್ಲಿ ನಾನೂ ಒಂದನ್ನಾದರೂ ಹೊರಡಿಸುವದಿಲ್ಲ.


ಜನಾಂಗಗಳನ್ನು ಅವರ ಮುಂಗಡೆಯಿಂದ ಓಡಿಸಿಬಿಟ್ಟು ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವಾಸ್ತ್ಯವಾಗಿರುವಂತೆ ಹಂಚಿಕೊಟ್ಟು ಆ ಜನಾಂಗಗಳ ಬೀಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.


ಅವರು ಇನ್ನೂ ಬಹು ಸ್ವಲ್ಪ ಜನರೂ ಕಾನಾನ್‍ದೇಶದಲ್ಲಿ ಪ್ರವಾಸಿಗಳೂ ಆಗಿರುವಾಗಲೇ


[ಯೆಹೋವನು ಇಂತೆನ್ನುತ್ತಾನೆ - ] ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೊತ್ತಲಗಳು ಪಾಳುಬಿದ್ದವು, ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ, ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಿವಾಸವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು