Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:5 - ಕನ್ನಡ ಸತ್ಯವೇದವು J.V. (BSI)

5 ನಿಮ್ಮ ದೇವರಾದ ಯೆಹೋವನು ತಾನೇ ಅವರನ್ನು ನಿಮ್ಮ ಕಣ್ಣುಮುಂದೆ ಹೊರಡಿಸಿಬಿಡುವನು. ಆತನ ವಾಗ್ದಾನದಂತೆ ಅವರ ದೇಶವನ್ನು ನೀವು ಸ್ವತಂತ್ರಿಸಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಮ್ಮ ದೇವರಾದ ಯೆಹೋವನು ತಾನೇ ಅವರನ್ನು ನಿಮ್ಮ ಕಣ್ಣೆದುರಿನಲ್ಲಿ ಹೊರಡಿಸಿಬಿಡುವನು. ಆತನ ವಾಗ್ದಾನದಂತೆ ಅವರ ದೇಶವನ್ನು ನೀವು ಸ್ವಂತ ಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ದೇವರಾದ ಸರ್ವೇಶ್ವರ ತಾವೇ ಉಳಿದವರನ್ನು ನಿಮ್ಮ ಕಣ್ಮುಂದೆ ಹೊರಡಿಸಿಬಿಡುವರು. ಅವರ ವಾಗ್ದಾನದಂತೆ ಆ ಜನರ ನಾಡನ್ನು ನೀವು ವಶಪಡಿಸಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ನಿಮ್ಮ ದೇವರಾದ ಯೆಹೋವನು ಅಲ್ಲಿಯ ನಿವಾಸಿಗಳನ್ನು ಬಲವಂತದಿಂದ ಹೊರಡಿಸುತ್ತಾನೆ. ಆ ಪ್ರದೇಶವನ್ನು ನೀವು ಪಡೆದುಕೊಳ್ಳುತ್ತೀರಿ. ನಿಮ್ಮ ದೇವರಾದ ಯೆಹೋವನು ನಿಮಗಾಗಿ ಇದನ್ನು ಮಾಡುವುದಾಗಿ ವಾಗ್ದಾನ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ಉಳಿದವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು, ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿ ಬಿಡುವರು. ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:5
9 ತಿಳಿವುಗಳ ಹೋಲಿಕೆ  

ಒಟ್ಟಾರೆ ಲೆಬನೋನಿನಿಂದ ವಿುಸ್ರೆಫೋತ್ಮಯಿವಿುನವರೆಗಿರುವ ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳೂ ಇವೇ. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಎದುರಿನಿಂದ ಹೊರಡಿಸಿಬಿಡುವೆನು. ನೀನಾದರೋ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ


ಆತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಎದುರಿನಿಂದ ಹೊರಡಿಸುವನು; ನಿಮಗಿಂತಲೂ ಮಹಾಬಲಿಷ್ಠ ಜನಾಂಗಗಳ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.


ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನೂ ಕಾನಾನ್ಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿಮ್ಮ ಮುಂದೆ ಹೊರಡಿಸುವೆನು.


ನಾನು ನಿನ್ನ ಮುಂದುಗಡೆಯಲ್ಲಿ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸುವೆನು.


ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವದಕ್ಕೂ ನಾನು ಗೊತ್ತುಮಾಡಿರುವ ಸ್ಧಳಕ್ಕೆ ಕರತರುವದಕ್ಕೂ ದೂತನನ್ನು ನಿಮ್ಮ ಮುಂದುಗಡೆಯಲ್ಲಿ ಕಳುಹಿಸುತ್ತೇನೆ.


ಹೀಗಿರುವದರಿಂದ ಯೆಹೋಶುವನು ಸಾಯುವ ಮೊದಲು ಹೊರಡಿಸದೆ ಬಿಟ್ಟ ಜನಾಂಗಗಳಲ್ಲಿ ನಾನೂ ಒಂದನ್ನಾದರೂ ಹೊರಡಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು