Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:14 - ಕನ್ನಡ ಸತ್ಯವೇದವು J.V. (BSI)

14 ಹೀಗಿರುವದರಿಂದ ನೀವು ಯೆಹೋವನಲ್ಲಿ ಭಯ ಭಕ್ತಿಯುಳ್ಳವರಾಗಿರ್ರಿ; ಆತನನ್ನು ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ; ಯೆಹೋವನನ್ನೇ ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯಾಚೆಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದುಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ತರುವಾಯ ಯೆಹೋಶುವನು ಜನರಿಗೆ, “ಈಗ ನೀವು ಯೆಹೋವನ ಮಾತುಗಳನ್ನು ಕೇಳಿದ್ದೀರಿ. ನೀವು ಆತನಲ್ಲಿ ಭಯಭಕ್ತಿಯಿಂದಿರಬೇಕು. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಪೂಜಿಸುತ್ತಿದ್ದ ಸುಳ್ಳುದೇವರುಗಳನ್ನು ಎಸೆದುಬಿಡಿ. ಈಗ ನೀವು ಯೆಹೋವನ ಸೇವೆಯನ್ನು ಮಾತ್ರ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಆದ್ದರಿಂದ ನೀವು ಈಗ ಯೆಹೋವ ದೇವರಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಅವರನ್ನು ಸೇವಿಸಿರಿ. ನಿಮ್ಮ ಪೂರ್ವಜರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಸೇವಿಸಿದ ದೇವರುಗಳನ್ನು ತೊರೆದುಬಿಟ್ಟು ಯೆಹೋವ ದೇವರನ್ನೇ ನೀವು ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:14
34 ತಿಳಿವುಗಳ ಹೋಲಿಕೆ  

ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಂಡು ಆತನನ್ನು ಸತ್ಯದಿಂದಲೂ ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;


ಆದದರಿಂದ ಇಸ್ರಾಯೇಲ್ಯರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ ಆತನನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡುತ್ತಾ


ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ - ನಿಮ್ಮಲ್ಲಿರುವ ಅನ್ಯದೇವರುಗಳನ್ನು ತಳ್ಳಿಬಿಟ್ಟು ನಿಮ್ಮನ್ನು ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿರಿ; ನಾವು ಬೇತೇಲಿಗೆ ಹೊರಟುಹೋಗೋಣ.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಆಗ ಯೆಹೋಶುವನು ಅವರಿಗೆ - ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೆಗೆದು ಹಾಕಿ ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ಮನಸ್ಸನ್ನು ತಿರುಗಿಸಿಕೊಳ್ಳಿರಿ ಅಂದನು.


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ ಸದಾಚಾರಿಗಳಾಗಿ ನಡೆಯುವವರು ಧನ್ಯರು.


ಆಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ - ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಕೊಳ್ಳದೆ ಅವರ ಬೊಂಬೆಗಳಿಂದ ನಿಮ್ಮನ್ನು ಹೊಲಸುಮಾಡಿಕೊಳ್ಳದೆ ಇರಬೇಕು;


ಯೆಹೋವನ ಭಯವೇ ಜ್ಞಾನಕ್ಕೆ ಮೂಲವು; ಆತನ ಕಟ್ಟಳೆಗಳನ್ನು ನಡಿಸುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು.


ನೀನು ನಿನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ - ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶವು ಅನ್ಯದೇಶಗಳವರ ಅಶುದ್ಧತ್ವದಿಂದಲೂ ಅವರ ವಿಗ್ರಹಗಳಿಂದಲೂ ಮಲಿನವಾಯಿತು. ಅದು ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿರುತ್ತದೆ.


ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪು ಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ಯೆಹೋಶುವನು ಅವರೆಲ್ಲರಿಗೆ - ನಿಮ್ಮ ದೇವರಾದ ಯೆಹೋವನು ಹೇಳುವದೇನಂದರೆ - ಅಬ್ರಹಾಮ್, ನಾಹೋರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ [ಯೂಫ್ರೇಟೀಸ್] ಹೊಳೆಯ ಆಚೆಯಲ್ಲಿದ್ದು ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ನೀವು ನಿಮ್ಮ ದೇವರಾದ ಯೆಹೋವನ ಸೇವೆಯ ವಿಷಯದಲ್ಲಿ ಸದಾಚಾರವುಳ್ಳವರಾಗಿರಬೇಕು.


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತ ನಿಯಮ.


ಹೀಗಿರಲಾಗಿ ಯೂದಾಯ ಗಲಿಲಾಯ ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಹೆಚ್ಚುತ್ತಾ ಬಂತು.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ಒಳ್ಳೆಯ ಹೃದಯದಲ್ಲಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವವರು.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ಅವರು ಐಗುಪ್ತದಲ್ಲಿ ಸೂಳೆತನ ಮಾಡುತ್ತಿದ್ದರು, ಬಾಲ್ಯದಲ್ಲೇ ಸೂಳೆಯರಾಗಿ ನಡೆಯುತ್ತಿದ್ದರು; ಅಲ್ಲಿ ಅವರ ಸ್ತನಗಳು ಹಿಸಕಲ್ಪಟ್ಟವು, ಎಳೆಯ ತೊಟ್ಟುಗಳು ನಸುಕಲ್ಪಟ್ಟವು.


ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ಪೂರ್ಣ ಜ್ಞಾನವಿವೇಕಗಳಿಂದ ಕೂಡಿ ಉತ್ತಮ ಕಾರ್ಯಗಳು ಯಾವವೆಂದು ನೀವು ವಿವೇಚಿಸುವವರಾಗಬೇಕೆಂತಲೂ ಕ್ರಿಸ್ತನು ಬರುವ ದಿನದಲ್ಲಿ ನೀವು


ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.


ನೀನು ಪಾಪವನ್ನು ಕ್ಷವಿುಸುವವನಾದ್ದರಿಂದ ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.


ನನ್ನ ಮನಸ್ಸು ನಿನ್ನ ನಿಬಂಧನೆಗಳಲ್ಲಿ ಆಸಕ್ತವಾಗಲಿ; ಆಗ ನನ್ನ ಆಶಾಭಂಗಕ್ಕೆ ಕಾರಣವಿರುವದಿಲ್ಲ.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು.


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ಆಗ ಸಮುವೇಲನು ಅವರಿಗೆ - ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರಿಗಿಕೊಂಡಿರುವದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ; ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು ಅಂದನು.


ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು ವಿಧೇಯರಾಗಿ ಆತನನ್ನು ಸೇವಿಸುತ್ತಾ ತಪ್ಪದೆ ಆತನ ಮಾತು ಕೇಳುವವರಾಗಿ ಆತನನ್ನೇ ಹೊಂದಿಕೊಂಡಿರುವದಾದರೆ ಎಷ್ಟೋ ಒಳ್ಳೇದು.


ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು; ಆತನನ್ನೇ ಸೇವಿಸಬೇಕು; ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.


ನಿಮ್ಮನ್ನು ಐಗುಪ್ತದಿಂದ ಕರತಂದ ಯೆಹೋವನೆಂಬ ನಾನೇ ನಿಮ್ಮ ದೇವರು. ಅಗಲವಾಗಿ ಬಾಯಿದೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.


ಮನುಷ್ಯನೇ, ಒಳ್ಳೆಯದು ಇಂಥದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಷ್ಟೆ; ನ್ಯಾಯವನ್ನು ಆಚರಿಸುವದು, ಕರುಣೆಯಲ್ಲಿ ಆಸಕ್ತನಾಗಿರುವದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವದು, ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು