ಯೆಹೋಶುವ 24:17 - ಕನ್ನಡ ಸತ್ಯವೇದವು J.V. (BSI)17 ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನೂ ನಮ್ಮ ಪಿತೃಗಳನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನೇ ಅಲ್ಲವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಾವು ದಾಸತ್ವದಲ್ಲಿದ್ದ ಈಜಿಪ್ಟಿನಿಂದ ನಮ್ಮನ್ನೂ ನಮ್ಮ ಪೂರ್ವಜರನ್ನೂ ಹೊರತಂದವರು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ. ನಮ್ಮೆದುರಿನಲ್ಲೇ ಅವರು ಮಾಡಿದ ಅದ್ಭುತಕಾರ್ಯಗಳನ್ನು ನೋಡಿದ್ದೇವೆ. ನಮ್ಮ ಎಲ್ಲಾ ಪ್ರಯಾಣಗಳಲ್ಲೂ ನಾವು ದಾಟಿಬಂದ ಜನಾಂಗಗಳಿಂದ ನಮ್ಮನ್ನು ಕಾಪಾಡಿದವರು ಅವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಮ್ಮ ಜನರನ್ನು ಈಜಿಪ್ಟಿನಿಂದ ಹೊರತಂದವನು ನಮ್ಮ ದೇವರಾದ ಯೆಹೋವನೆಂದು ನಮಗೆ ಗೊತ್ತು. ನಾವು ಈಜಿಪ್ಟಿನಲ್ಲಿ ಗುಲಾಮರಾಗಿದ್ದೆವು; ಆದರೆ ಯೆಹೋವನು ಅಲ್ಲಿ ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿ ನಮ್ಮನ್ನು ಅಲ್ಲಿಂದ ಬಿಡಿಸಿಕೊಂಡು ಬಂದನು. ನಾವು ಬೇರೆ ದೇಶಗಳಲ್ಲಿ ಪ್ರವಾಸ ಮಾಡಿಕೊಂಡು ಬರುವಾಗ ನಮ್ಮನ್ನು ರಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ ನಮ್ಮ ದೇವರಾದ ಯೆಹೋವ ದೇವರು ತಾವೇ ನಮ್ಮನ್ನೂ ನಮ್ಮ ಪಿತೃಗಳನ್ನೂ ದಾಸತ್ವದ ಮನೆಯಾದ ಈಜಿಪ್ಟ್ ದೇಶದಿಂದ ಬರಮಾಡಿ, ನಮ್ಮ ಕಣ್ಣುಗಳ ಮುಂದೆ ಆ ಅದ್ಭುತ ಸೂಚಕಕಾರ್ಯಗಳನ್ನು ಮಾಡಿ, ನಾವು ನಡೆದ ಎಲ್ಲಾ ಮಾರ್ಗಗಳಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದವರು. ಅಧ್ಯಾಯವನ್ನು ನೋಡಿ |