ಯೆಹೋಶುವ 24:2 - ಕನ್ನಡ ಸತ್ಯವೇದವು J.V. (BSI)2 ಯೆಹೋಶುವನು ಅವರೆಲ್ಲರಿಗೆ - ನಿಮ್ಮ ದೇವರಾದ ಯೆಹೋವನು ಹೇಳುವದೇನಂದರೆ - ಅಬ್ರಹಾಮ್, ನಾಹೋರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ [ಯೂಫ್ರೇಟೀಸ್] ಹೊಳೆಯ ಆಚೆಯಲ್ಲಿದ್ದು ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯೆಹೋಶುವ ಅವರೆಲ್ಲರನ್ನು ಉದ್ದೇಶಿಸಿ, “ನಿಮ್ಮ ದೇವರಾದ ಸರ್ವೇಶ್ವರಸ್ವಾಮಿ ಹೇಳುವುದನ್ನು ಗಮನಿಸಿರಿ: ‘ಅಬ್ರಹಾಮ್, ನಾಹೊರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆ ಇದ್ದರು. ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ‘ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ “ತೆರಹ” ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋಶುವನು ಅವರೆಲ್ಲರಿಗೂ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ‘ಪೂರ್ವದಲ್ಲಿ ನಿಮ್ಮ ಮೂಲ ಪುರುಷರಾದ ಅಬ್ರಹಾಮನಿಗೂ ನಾಹೋರನಿಗೂ ತಂದೆಯಾದ ತೆರಹನು ಯೂಫ್ರೇಟೀಸ್ ನದಿಯ ಆಚೆ ವಾಸವಾಗಿದ್ದಾಗ ಅವರೆಲ್ಲರೂ ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು. ಅಧ್ಯಾಯವನ್ನು ನೋಡಿ |