Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:20 - ಕನ್ನಡ ಸತ್ಯವೇದವು J.V. (BSI)

20 ನೀವು ಆತನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರೆ ಆತನು ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿಬಿಡುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀವು ಆತನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸಿದರೆ ಆತನು ನಿಮಗೆ ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿ ಬಿಡುವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀವು ಅವರನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸಿದರೆ ನಿಮಗೆ ವಿಮುಖರಾಗಿ, ಒಳಿತಿಗೆ ಬದಲಾಗಿ ಕೇಡನ್ನೇ ಬರಮಾಡಿ ನಿಮ್ಮನ್ನು ನಾಶಮಾಡಿಬಿಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀವು ಯೆಹೋವನನ್ನು ಬಿಟ್ಟು ಅನ್ಯದೇವರುಗಳ ಸೇವೆಮಾಡಿದರೆ ಆತನು ನಿಮಗೆ ಕೇಡನ್ನು ಬರಮಾಡುವನು. ಯೆಹೋವನು ನಿಮ್ಮನ್ನು ನಾಶಮಾಡುತ್ತಾನೆ. ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯವನಾಗಿದ್ದಾನೆ. ಆದರೆ ನೀವು ಆತನಿಗೆ ವಿಮುಖರಾದರೆ ಆತನು ನಿಮ್ಮನ್ನು ನಾಶಮಾಡುತ್ತಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀವು ಯೆಹೋವ ದೇವರನ್ನು ಬಿಟ್ಟು, ಅನ್ಯದೇವರುಗಳನ್ನು ಸೇವಿಸಿದರೆ, ಅವರು ನಿಮಗೆ ಒಳ್ಳೆಯದನ್ನು ಮಾಡದೆ ಕೇಡನ್ನು ಬರಮಾಡಿ ನಿಮ್ಮನ್ನು ದಹಿಸಿಬಿಡುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:20
19 ತಿಳಿವುಗಳ ಹೋಲಿಕೆ  

ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರ ಗಣವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ - ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಾಲ್ವತ್ತು ವರುಷ ನನಗೆ ಯಜ್ಞಗಳನ್ನೂ ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ದುಷ್ಟನು ನಡಿಸುವ ದುರಾಚಾರಗಳನ್ನೆಲ್ಲಾ ನಡಿಸಿದರೆ ಅವನು ಬಾಳುವನೋ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಯೆಹೋವನೇ, ಇಸ್ರಾಯೇಲ್ಯರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು; ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ದೂಳಿನಲ್ಲಿ ಬರೆಯಲ್ಪಡುವದು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮನನ್ನು ದುಃಖಪಡಿಸಿದರು; ಆದದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶನವಾಗುವರು; ಹೌದು, ಯೆಹೋವನನ್ನು ತೊರೆದವರು ನಿರ್ಮೂಲರಾಗುವರು.


ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವದು; ಆತನ ಬಲವಾದ ರೌದ್ರಕ್ಕೆ ಆತನನ್ನು ತೊರೆದುಬಿಟ್ಟವರೆಲ್ಲರೂ ಗುರಿಯಾಗುವರು ಎಂದು ನಾವು ಅರಸನ ಮುಂದೆ ಹೇಳಿದ್ದರಿಂದ ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವದಕ್ಕೋಸ್ಕರ ಸೈನ್ಯವನ್ನೂ ಅಶ್ವಬಲವನ್ನೂ ಕೇಳಿಕೊಳ್ಳುವದಕ್ಕೆ ನಾಚಿಕೊಂಡಿದ್ದೆನು.


ಅವನು ಆಸನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ - ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿರಿ. ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟು ಬಿಡುವನು.


ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನಗೆ ಸಂತೋಷವಿರುವದಿಲ್ಲ ಎಂದು ಬರೆದದೆ.


ನೀವು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ


ಆತನನ್ನು ಕೋಪಗೊಳಿಸಿದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆದು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿವಸ ಇರದೆ ನಾಶವಾಗಿಯೇ ಹೋಗುವಿರಿ.


ಜನರು ಯೆಹೋಶುವನಿಗೆ - ಇಲ್ಲ, ನಾವು ಯೆಹೋವನನ್ನೇ ಸೇವಿಸುವೆವು ಅಂದರು.


ನೀವು ಯೆಹೋವನ ಮಾತನ್ನು ಕೇಳದೆಯೂ ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವದು.


ನೀವು ದ್ರೋಹಿಗಳಾಗಿಯೇ ಇದ್ದರೆ ನಿಮ್ಮ ಅರಸನೊಡನೆ ನಾಶವಾಗುವಿರಿ ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಕೊಳ್ಳಬೇಕೆಂದು ಯೆಹೋವನ ಮಂಡಲಿಯಾದ ಸಮಸ್ತ ಇಸ್ರಾಯೇಲ್ಯರ ಎದುರಿನಲ್ಲಿ ನಮ್ಮ ದೇವರಿಗೆ ಕೇಳಿಸುವಂತೆ ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೇ ದೇಶವು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸ್ವಾಸ್ತ್ಯವಾಗಿರುವದು.


ನನ್ನ ವಿಧಿಗಳನ್ನು ಮೀರಿ ನನ್ನ ನೇಮಗಳನ್ನು ಪಾಲಿಸದೆಹೋದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು