Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:22 - ಕನ್ನಡ ಸತ್ಯವೇದವು J.V. (BSI)

22 ಅವನು ಅವರಿಗೆ - ನೀವು ಯೆಹೋವನ ಸೇವೆಯನ್ನು ಆರಿಸಿಕೊಂಡಿರುವದಕ್ಕೆ ನೀವೇ ಸಾಕ್ಷಿಗಳು ಎನ್ನಲು ಅವರು - ಹೌದು, ನಾವೇ ಸಾಕ್ಷಿಗಳು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋಶುವನು ಅವರಿಗೆ, “ನೀವು ಯೆಹೋವನ ಸೇವೆಯನ್ನು ಆರಿಸಿಕೊಂಡಿರುವುದಕ್ಕೆ ನೀವೇ ಸಾಕ್ಷಿಗಳು ಅನ್ನಲು ಅವರು ಹೌದು ನಾವೇ ಸಾಕ್ಷಿಗಳು” ಎಂದರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೆಹೋಶುವ ಅವರಿಗೆ, “ನೀವು ಸರ್ವೇಶ್ವರನಿಗೇ ಸೇವೆಸಲ್ಲಿಸುವುದನ್ನು ಆರಿಸಿಕೊಂಡಿರುವುದಕ್ಕೆ ನೀವೇ ಸಾಕ್ಷಿಗಳು,” ಎನ್ನಲು ಅವರು, “ಹೌದು, ನಾವೇ ಸಾಕ್ಷಿಗಳು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅದಕ್ಕೆ ಯೆಹೋಶುವನು, “ನೀವು ನಿಮ್ಮನ್ನೂ ನಿಮ್ಮ ಸುತ್ತಲಿರುವ ಜನರನ್ನೂ ನೋಡಿರಿ. ನೀವು ಯೆಹೋವನ ಸೇವೆಯನ್ನೇ ಆರಿಸಿಕೊಂಡಿದ್ದೀರಿ ಎಂಬುದು ನಿಮ್ಮೆಲ್ಲರಿಗೆ ಗೊತ್ತು ಮತ್ತು ಅದಕ್ಕೆ ನೀವು ಒಪ್ಪಿದ್ದೀರಿ. ನೀವೆಲ್ಲರೂ ಇದಕ್ಕೆ ಸಾಕ್ಷಿಯಾಗಿರುವಿರಾ?” ಎಂದು ಕೇಳಿದನು. ಜನರು, “ಹೌದು, ಇದು ನಿಜ! ನಾವೆಲ್ಲರು ಯೆಹೋವನ ಸೇವೆಯನ್ನೇ ಆರಿಸಿಕೊಂಡಿದ್ದೇವೆ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದಕ್ಕೆ ಯೆಹೋಶುವನು ಜನರಿಗೆ, “ನೀವು ಯೆಹೋವ ದೇವರನ್ನು ಸೇವಿಸುವುದಕ್ಕೆ ಅವರನ್ನು ಆಯ್ದುಕೊಂಡಿರುವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ,” ಎಂದನು. ಅದಕ್ಕವರು, “ಹೌದು, ನಾವೇ ಸಾಕ್ಷಿಗಳಾಗಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:22
7 ತಿಳಿವುಗಳ ಹೋಲಿಕೆ  

ನಿನ್ನ ನೇಮಗಳನ್ನು ಆರಿಸಿಕೊಂಡಿದ್ದೇನೆ; ನಿನ್ನ ಕೈ ನನಗೆ ನೆರವಾಗಲಿ.


ನಿನಗೆ ವಿರೋಧವಾಗಿ ಪಾಪಮಾಡದಂತೆ ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.


ಕೆಲವು ಮಾತ್ರ ಬೇಕಾದದ್ದು, ಅಥವಾ ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ; ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಎಂದು ಉತ್ತರಕೊಟ್ಟನು.


ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ, ನಿನ್ನ ಬಾಯೇ, ನಿನ್ನ ತುಟಿಗಳು ಕೂಡಾ ನಿನಗೆ ವಿರುದ್ಧವಾಗಿ ಸಾಕ್ಷಿಕೊಡುತ್ತವೆ.


ನಮಗೆ ಯೆಹೋವನೇ ದೇವರಾಗಿರುವನೆಂದೂ ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಂಡು ಆತನ ಮಾತಿಗೆ ಲಕ್ಷ್ಯವಿಡುವೆವೆಂದೂ ನೀವು ಈಗ ಒಡಂಬಟ್ಟಿದ್ದೀರಿ.


ಅದಕ್ಕೆ ಅವನು - ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ತಿಳಿದಿಯಾ?


ಜನರು ಯೆಹೋಶುವನಿಗೆ - ಇಲ್ಲ, ನಾವು ಯೆಹೋವನನ್ನೇ ಸೇವಿಸುವೆವು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು