Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:25 - ಕನ್ನಡ ಸತ್ಯವೇದವು J.V. (BSI)

25 ಹೀಗೆ ಯೆಹೋಶುವನು ಶೆಕೆವಿುನಲ್ಲಿ ಇಸ್ರಾಯೇಲ್ಯರೊಡನೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ನ್ಯಾಯವಿಧಿಗಳನ್ನು ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೀಗೆ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲರೊಡನೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೆಲವು ನಿಬಂಧನೆಗಳನ್ನು ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹೀಗೆ ಯೆಹೋಶುವ ಶೆಕೆಮಿನಲ್ಲಿ ಇಸ್ರಯೇಲರೊಡನೆ ಒಪ್ಪಂದ ಮಾಡಿಕೊಂಡು ಅವರಿಗೆ ವಿಧಿನಿಯಮಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ಯೆಹೋಶುವನು ಶೆಕೆಮಿನಲ್ಲಿ ಜನರಿಗಾಗಿ ಒಂದು ಒಡಂಬಡಿಕೆಯನ್ನು ಮಾಡಿದನು. ಅದು ಅವರಿಗೆ ಪಾಲಿಸಬೇಕಾದ ಒಂದು ವಿಧಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:25
17 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅದನ್ನು ಆ ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲ್ಯರಿಗಾಗಿ ಒಂದು ನಿಯಮವನ್ನು ನಿರ್ಣಯಮಾಡಿ ಅವರನ್ನು ಪರೀಕ್ಷಿಸಿ ಹೀಗಂದನು -


ಈ ಎಲ್ಲಾ ಕಾರಣಗಳಿಂದ ನಾವು ಲೇಖನ ರೂಪವಾದ ಪ್ರತಿಜ್ಞೆಯನ್ನು ಮಾಡಿದೆವು. ಅದಕ್ಕೆ ನಮ್ಮ ಪ್ರಭುಗಳೂ ಲೇವಿಯರೂ ಯಾಜಕರೂ ಸಹಿಮಾಡಿ ಮುದ್ರೆಹಾಕಿದರು.


ಅನಂತರ ಯೆಹೋಯಾದನು ಎಲ್ಲಾ ಜನರನ್ನೂ ಅರಸನನ್ನೂ ಪ್ರೇರಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣಮಾಡಿದನು.


ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವದಾಗಿ ಆತನಿಗೆ ಪ್ರಮಾಣಮಾಡಿದರು. ಇದಲ್ಲದೆ ರಾಜಪ್ರಜೆಗಳಿಗೂ ಒಡಂಬಡಿಕೆಯಾಯಿತು.


ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿಹೋಗುವಂತೆ ಇಸ್ರಾಯೇಲ್‍ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವದಕ್ಕೆ ಮನಸ್ಸುಳ್ಳವನಾಗಿದ್ದೇನೆ.


ಈ ಪ್ರಮಾಣದ ನಿವಿುತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಲವಲವಿಕೆಯಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾಕಡೆಗಳಲ್ಲಿಯೂ ಸಮಾಧಾನವನ್ನನುಗ್ರಹಿಸಿದನು.


ಇದಲ್ಲದೆ ಅವರು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ತಮ್ಮ ಪಿತೃಗಳ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ


ಇದಲ್ಲದೆ ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರಗ್ರಂಥದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲೇ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ


ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆವಿುನಲ್ಲಿ ಕೂಟಕ್ಕೆ ಕರಿಸಲು ಅವರ ಹಿರಿಯರೂ ಪ್ರಧಾನರೂ ನ್ಯಾಯಾಧಿಪತಿಗಳೂ ಅಧಿಕಾರಿಗಳೂ ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.


ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲ್ಯರೊಡನೆ ಮಾಡಿದ ನಿಬಂಧನವಲ್ಲದೆ ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ನಿಬಂಧನ ವಚನಗಳು.


ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ನ್ಯಾಯವಿಧಿಗಳನ್ನೂ ವಿವರಿಸಲು ಜನರೆಲ್ಲರು - ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು ಎಂದು ಒಗ್ಗಟ್ಟಾಗಿ ಉತ್ತರ ಕೊಟ್ಟರು.


ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ಯಾಕೋಬನಿಗೆ ಒಪ್ಪಿಸಲು ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾವೃಕ್ಷದ ಬುಡದಲ್ಲಿ ಹೂಳಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು