ಯೆಹೋಶುವ 24:27 - ಕನ್ನಡ ಸತ್ಯವೇದವು J.V. (BSI)27 ಎಲ್ಲಾ ಜನರಿಗೆ - ಇಗೋ, ಈ ಕಲ್ಲು ನಮ್ಮ ವಿಷಯದಲ್ಲಿ ಸಾಕ್ಷಿ ಹೇಳುವದು. ಯೆಹೋವನು ನಮಗೆ ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿರುವದರಿಂದ ನೀವು ನಿಮ್ಮ ದೇವರಾದ ಆತನನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧಸಾಕ್ಷಿಯಾಗಿರುವದು ಎಂದು ಹೇಳಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಎಲ್ಲಾ ಜನರಿಗೆ, “ಇಗೋ, ಈ ಕಲ್ಲು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಯೆಹೋವನು ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿದೆ. ಆದುದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧವಾಗಿ ಸಾಕ್ಷಿಯಾಗಿರುವುದು” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಬಳಿಕ ಎಲ್ಲಾ ಜನರಿಗೆ, “ಇಗೋ, ನೋಡಿ ಈ ಕಲ್ಲು! ಇದು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಸರ್ವೇಶ್ವರ ನಮಗೆ ಹೇಳಿದ ಎಲ್ಲ ಮಾತುಗಳನ್ನು ಇದು ಕೇಳಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆಗ ಯೆಹೋಶುವನು ಜನರೆಲ್ಲರಿಗೆ, “ನಾವು ಇಂದು ಹೇಳಿದ ಎಲ್ಲವನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಕಲ್ಲು ನಿಮಗೆ ಸಾಕ್ಷಿಯಾಗಿರುವುದು. ಇಂದು ಯೆಹೋವನು ನಮ್ಮೊಡನೆ ಮಾತನಾಡುತ್ತಿದ್ದಾಗ ಈ ಕಲ್ಲು ಇಲ್ಲಿಯೇ ಇತ್ತು. ಅದಕ್ಕಾಗಿ ಈ ಕಲ್ಲು ಇಂದು ನಡೆದ ಸಂಗತಿಯನ್ನು ನೆನಪಿನಲ್ಲಿಡಲು ನಮಗೆ ಸಹಾಯಕವಾಗುವುದು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿಮುಖರಾದರೆ ಈ ಕಲ್ಲೇ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆಹೋಶುವನು ಜನರಿಗೆ, “ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಏಕೆಂದರೆ ಇದು ಯೆಹೋವ ದೇವರು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿದೆ. ಆದ್ದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |