Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:31 - ಕನ್ನಡ ಸತ್ಯವೇದವು J.V. (BSI)

31 ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವನು ಇಸ್ರಾಯೇಲ್ಯರಿಗೋಸ್ಕರ ನಡಿಸಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲ್ಯರು ಯೆಹೋವನನ್ನು ಸೇವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವನು ಇಸ್ರಾಯೇಲರಿಗೋಸ್ಕರ ನಡೆಸಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲ್ಯರು ಯೆಹೋವನನ್ನು ಆರಾಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯೆಹೋಶುವನ ದಿನಗಳಲ್ಲೂ ಅವನ ಕಾಲದಿಂದ ಇನ್ನೂ ಜೀವಿಸುತ್ತಿದ್ದ ಹಿರಿಯರ ದಿನಗಳಲ್ಲೂ ಇಸ್ರಯೇಲರು, ಸರ್ವೇಶ್ವರ ಇಸ್ರಯೇಲರ ಹಿತಕ್ಕಾಗಿ ನಡೆಸಿದ ಅದ್ಭುತಕಾರ್ಯಗಳಿಗೆ ಸಾಕ್ಷಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೋಶುವನು ಜೀವಿಸಿದಾಗ ಇಸ್ರೇಲರು ಯೆಹೋವನ ಸೇವೆಮಾಡಿದರು; ಯೆಹೋಶುವನ ಮರಣಾನಂತರವೂ ಅವರು ಯೆಹೋವನ ಸೇವೆಯನ್ನು ಮುಂದುವರೆಸಿದರು. ಯೆಹೋವನು ಇಸ್ರೇಲರಿಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೋಡಿದ್ದ ಅವರ ನಾಯಕರು ಜೀವಿಸಿದ್ದಾಗಲೂ ಇಸ್ರೇಲರು ಯೆಹೋವನ ಸೇವೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವ ದೇವರು ಇಸ್ರಾಯೇಲರಿಗೋಸ್ಕರ ಮಾಡಿದ ಎಲ್ಲ ಮಹತ್ಕಾರ್ಯಗಳನ್ನು ಅರಿತಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವ ದೇವರನ್ನು ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:31
13 ತಿಳಿವುಗಳ ಹೋಲಿಕೆ  

ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವನು ಇಸ್ರಾಯೇಲ್ಯರಿಗೋಸ್ಕರ ನಡಿಸಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲ್ಯರು ಯೆಹೋವನನ್ನು ಸೇವಿಸುತ್ತಿದ್ದರು.


ಮತ್ತು ಯೆಹೋವನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರೂ ಕೇಳಿ ನೀವು ಸ್ವಾಧೀನಮಾಡಿಕೊಳ್ಳವದಕ್ಕೆ ಯೊರ್ದನ್ ಹೊಳೆಯನ್ನು ದಾಟಿಹೋಗುವ ದೇಶದಲ್ಲಿ ವಾಸವಾಗಿರುವವರೆಗೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವದಕ್ಕೆ ಕಲಿತುಕೊಳ್ಳುವರು ಎಂದು ಹೇಳಿದನು.


ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನ ಶಿಕ್ಷಣಕ್ರಮವನ್ನೂ ಮಹಿಮೆಯನ್ನೂ ಭುಜಬಲವನ್ನೂ ಶಿಕ್ಷಾಹಸ್ತವನ್ನೂ


ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಕೇಳಿದಂತೆ ಈಗಲೂ ಕೇಳಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವದಿಲ್ಲ.


ಅವನು ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು.


ಯೆಹೋವನು ನಡಿಸಿದ ಆ ವಿಶೇಷಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಾ ಇದ್ದೇನೆ.


ಆದರೆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಕುಣಿಗಳು ತುಂಬಾ ಇದ್ದವು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಕುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.


ಯೆಹೋಶುವನು ಇಸ್ರಾಯೇಲ್ಯರನ್ನು ಕಳುಹಿಸಿದ ಮೇಲೆ ಅವರು ತಮ್ಮ ತಮ್ಮ ಪಾಲಿಗೆ ಬಂದ ಪ್ರದೇಶಗಳಿಗೆ ಹೋಗಿ ಅವುಗಳನ್ನು ಸ್ವತಂತ್ರಿಸಿಕೊಂಡರು.


ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ ಯೆಹೋವನನ್ನೂ ಆತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.


ಯೋಷೀಯನು ಇಸ್ರಾಯೇಲ್ಯರಿಗೆ ಸೇರಿದ ಎಲ್ಲಾ ಪ್ರಾಂತಗಳೊಳಗಿನ ಅಸಹ್ಯಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ ಇಸ್ರಾಯೇಲ್ಯರಲ್ಲಿ ಉಳಿದಿರುವವರು ತಮ್ಮ ದೇವರಾದ ಯೆಹೋವನನ್ನೇ ಸೇವಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು