ಯೆಹೋಶುವ 24:5 - ಕನ್ನಡ ಸತ್ಯವೇದವು J.V. (BSI)5 ತರುವಾಯ ನಾನು ಮೋಶೆ ಆರೋನರನ್ನು ಕಳುಹಿಸಿ ಆ ಐಗುಪ್ತ್ಯರಲ್ಲಿ ಅನೇಕ ಮಹತ್ಕಾರ್ಯಗಳನ್ನು ನಡಿಸಿ ಅವರನ್ನು ಬಾಧಿಸಿ ನಿಮ್ಮನ್ನು ಹೊರಗೆ ಕರತಂದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ತರುವಾಯ ನಾನು ಮೋಶೆ, ಆರೋನರನ್ನೂ ಕಳುಹಿಸಿ, ಆ ಐಗುಪ್ತದಲ್ಲಿ ಅನೇಕ ಮಹತ್ಕಾರ್ಯಗಳನ್ನು ನಡಿಸಿ, ಅವರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬಳಿಕ ನಾನು ಮೋಶೆ ಹಾಗೂ ಆರೋನರನ್ನು ಕಳಿಸಿ, ಆ ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿ, ಆ ಜನರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “‘ತರುವಾಯ ನಾನು ಮೋಶೆ ಆರೋನರನ್ನು ಈಜಿಪ್ಟಿಗೆ ಕಳುಹಿಸಿದೆ. ಅವರು ನನ್ನ ಜನರನ್ನು ಈಜಿಪ್ಟಿನಿಂದ ಹೊರತರಬೇಕೆಂಬುದು ನನ್ನ ಇಚ್ಛೆಯಾಗಿತ್ತು. ಈಜಿಪ್ಟಿನಲ್ಲಿ ಅನೇಕ ಅದ್ಭುತವಾದ ಕಾರ್ಯಗಳನ್ನು ನಡೆಸಿ ನಾನು ನಿಮ್ಮ ಜನರನ್ನು ಈಜಿಪ್ಟಿನಿಂದ ಹೊರಗೆ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ ‘ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ, ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಈಜಿಪ್ಟನ್ನು ಬಾಧಿಸಿದೆನು. ತರುವಾಯ ನಿಮ್ಮನ್ನು ಹೊರಗೆ ತಂದೆನು. ಅಧ್ಯಾಯವನ್ನು ನೋಡಿ |