Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:6 - ಕನ್ನಡ ಸತ್ಯವೇದವು J.V. (BSI)

6 ನಿಮ್ಮ ಪಿತೃಗಳು ಐಗುಪ್ತದಿಂದ ಬಿಡುಗಡೆಯಾಗಿ ಕೆಂಪುಸಮುದ್ರಕ್ಕೆ ಬರುತ್ತಿರುವಾಗ ಐಗುಪ್ತ್ಯರು ರಥಾಶ್ವಬಲಗಳ ಸಹಿತವಾಗಿ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಮ್ಮ ಪೂರ್ವಿಕರು ಐಗುಪ್ತದಿಂದ ಬಿಡುಗಡೆಯಾಗಿ ಕೆಂಪು ಸಮುದ್ರಕ್ಕೆ ಬರುತ್ತಿರುವಾಗ ಐಗುಪ್ತರು ರಥಾಶ್ವಬಲಗಳ ಸಹಿತವಾಗಿ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮ ಪೂರ್ವಜರು ಈಜಿಪ್ಟಿನಿಂದ ಬಿಡುಗಡೆಯಾಗಿ ಕೆಂಪುಸಮುದ್ರಕ್ಕೆ ಬರುತ್ತ ಇರುವಾಗ ಈಜಿಪ್ಟಿನವರು ರಥಾಶ್ವಬಲಗಳ ಸಹಿತ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೀಗೆ ನಿಮ್ಮ ಪೂರ್ವಿಕರು ಈಜಿಪ್ಟಿನಿಂದ ಹೊರಡು ಕೆಂಪು ಸಮುದ್ರಕ್ಕೆ ಬಂದರು. ಈಜಿಪ್ಟಿನ ಜನರು ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಅವರನ್ನು ಬೆನ್ನಟ್ಟಿಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ನಿಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಹೊರಡಿಸಿದಾಗ ನೀವು ಸಮುದ್ರದ ತೀರಕ್ಕೆ ಬಂದಿರಿ. ಆದರೆ ಈಜಿಪ್ಟಿನವರು ರಥಗಳ ಮತ್ತು ರಾಹುತರ ಸಂಗಡ ನಿಮ್ಮ ಪೂರ್ವಜರನ್ನು ಕೆಂಪು ಸಮುದ್ರದವರೆಗೂ ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:6
11 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ಇಸ್ರಾಯೇಲ್ಯರು ಕೆಂಪುಸಮುದ್ರವನ್ನು ಒಣಭೂವಿುಯನ್ನು ದಾಟುವಂತೆ ದಾಟಿದರು; ಐಗುಪ್ತದೇಶದವರು ಅದನ್ನು ದಾಟುವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.


ಅವನೇ ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡಿಸಿಕೊಂಡು ಬಂದವನು.


ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು; ಮೋಶೆಯನ್ನೂ ಆರೋನನನ್ನೂ ವಿುರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.


ಆತನು ಸಮುದ್ರವನ್ನು ಭೇದಿಸಿ ಅದರ ನೀರನ್ನು ರಾಶಿಯಂತೆ ನಿಲ್ಲಿಸಿ ಅವರನ್ನು ದಾಟಿಸಿದನು.


ನಮ್ಮ ಪಿತೃಗಳು ಸಮುದ್ರ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದಿ. ಅವರನ್ನು ಹಿಂದಟ್ಟುವವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿ ಬಿಟ್ಟಿ.


ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಸೈನ್ಯ ಸೈನ್ಯವಾಗಿ ಐಗುಪ್ತದೇಶದಿಂದ ಹೊರಗೆ ಬರಮಾಡಿದನು.


ಇಸ್ರಾಯೇಲ್ಯರು ರಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರೂ ಮಕ್ಕಳೂ ಅಲ್ಲದೆ ಅವರ ಕಾಲ್ಬಲವೇ ಸುಮಾರು ಆರು ಲಕ್ಷ ಗಂಡಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು