Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:15 - ಕನ್ನಡ ಸತ್ಯವೇದವು J.V. (BSI)

15 ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಅದ್ದುತ್ತಲೇ ಸುಗ್ಗೀಕಾಲದಲ್ಲೆಲ್ಲಾ ದಡಮೀರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು, ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡಮೀರಿ ಹರಿಯುತ್ತಿದ್ದ ಯೊರ್ದನ್ ನದಿಯ ನೀರು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿಗೆ ಬಂದರು. ಅದು ಸುಗ್ಗಿಯ ಕಾಲ ನದಿ ದಡಮೀರಿ ಹರಿಯುತ್ತಿತ್ತು. ಯಾಜಕರು ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಹರಿಯುತ್ತಿದ್ದ ಜೋರ್ಡನ್ ನದಿಯ ನೀರು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 (ಆಗ ಸುಗ್ಗಿಕಾಲವಾದ್ದರಿಂದ ಜೋರ್ಡನ್ ನದಿಯು ದಡಮೀರಿ ಹರಿಯುತ್ತಿತ್ತು.) ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುತ್ತಿದ್ದ ಯಾಜಕರು ನದಿಯ ತೀರಕ್ಕೆ ಬಂದರು. ಅವರು ನೀರಿನಲ್ಲಿ ಹೆಜ್ಜೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಎಂದಿನಂತೆ ಯೊರ್ದನ್ ನದಿಯು ಸುಗ್ಗಿಕಾಲದಲ್ಲಿ ದಡ ತುಂಬಿ ಹರಿಯುತ್ತಾ ಇತ್ತು. ಮಂಜೂಷವನ್ನು ಹೊರುವ ಯಾಜಕರ ಕಾಲುಗಳು ನೀರಿನ ಅಂಚಿನಲ್ಲಿ ಇಡುತ್ತಲೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:15
12 ತಿಳಿವುಗಳ ಹೋಲಿಕೆ  

ಯೊರ್ದನ್ ನದಿಯು ಪ್ರಥಮ ಮಾಸದಲ್ಲಿ ದಡತುಂಬಿ ಹರಿಯುತ್ತಿರುವಾಗ ಅದನ್ನು ದಾಟಿ ನದಿಯ ತಗ್ಗಿನ ಪೂರ್ವ ಪಶ್ಚಿಮ ಪ್ರದೇಶಗಳವರೆಲ್ಲರನ್ನೂ ಓಡಿಸಿಬಿಟ್ಟವರು ಇವರೇ.


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ [ಎದೋಮ್ಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?


[ಇಂತೆನ್ನುವ ನನಗೆ ಯೆಹೋವನು ಹೀಗೆ ಹೇಳಿದ್ದಾನೆ - ] ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ನಿರಪಾಯದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?


ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನಿಂದ ಮೇಲೆ ಬಂದು ಒಣನೆಲದಲ್ಲಿ ತಮ್ಮ ಕಾಲುಗಳನ್ನಿಟ್ಟ ಕೂಡಲೆ ನೀರು ಮುಂಚಿನಂತೆ ಬಂದು ಯೊರ್ದನ್ ಹೊಳೆಯು ದಡಮೀರಿ ಹರಿಯಹತ್ತಿತು.


ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ಹೊಳೆಯ ನೀರಲ್ಲಿ ಇಡುತ್ತಲೇ ಮೇಲಣಿಂದ ಬರುವ ನೀರು ಮುಂದೆ ಹೋಗದೆ ಅಲ್ಲೇ ರಾಶಿಯಾಗಿ ನಿಂತುಕೊಳ್ಳುವದು ಎಂದು ತಿಳಿಸಿದನು.


ಅದು ಕಾಲತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದುಬಿಡುತ್ತಾರೆ.


ಎಲೀಯನು ತಿರಿಗಿ ಅವನಿಗೆ - ದಯವಿಟ್ಟು ನೀನು ಇಲ್ಲೇ ಇರು; ಯೆಹೋವನು ನನಗೆ ಯೊರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ ಎಂದು ಹೇಳಿದನು. ಆಗ ಅವನು - ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲ ಎಂದು ಉತ್ತರಕೊಟ್ಟನು; ಆದದರಿಂದ ಇಬ್ಬರೂ ಹೊರಟು ಯೊರ್ದನ್ ಹೊಳೆಯ ದಡಕ್ಕೆ ಬಂದರು.


ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಕರ್ಮೆಲೂ ಕಂದುತ್ತವೆ, ಲೆಬನೋನಿನ ಚಿಗುರು ಬಾಡುತ್ತದೆ.


[ಒಂದಾನೊಂದು ದಿವಸ] ಬೆನ್ಯಾಮೀನ್ ಯೂದ ಕುಲದವರಲ್ಲಿ ಕೆಲವರು ದಾವೀದನಿದ್ದ ದುರ್ಗದ ಬಳಿಗೆ ಬರಲು ದಾವೀದನು ಹೊರಗೆ ಹೋಗಿ ಅವರೆದುರಿಗೆ ನಿಂತು ಅವರಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು