Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:4 - ಕನ್ನಡ ಸತ್ಯವೇದವು J.V. (BSI)

4 ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗತಕ್ಕ ಮಾರ್ಗವು ನಿಮಗೆ ಗೊತ್ತಾಗುವದು; ಆ ಮಾರ್ಗದಲ್ಲಿ ನೀವು ಮುಂಚೆ ಬರಲಿಲ್ಲವಲ್ಲಾ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗಬೇಕಾದ ಮಾರ್ಗವು ನಿಮಗೆ ಗೊತ್ತಾಗುವುದು; ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿರುವುದಿಲ್ಲ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ಅದರ ಹತ್ತಿರ ನೀವು ಹೋಗಬಾರದು. ನಿಮಗೂ ಮಂಜೂಷಕ್ಕೂ ಸುಮಾರು ಒಂದು ಕಿಲೋಮೀಟರ್ ಅಂತರವಿರಬೇಕು. ಹೀಗೆ ನೀವು ಹೋಗಬೇಕಾದ ಮಾರ್ಗ ನಿಮಗೆ ಗೊತ್ತಾಗುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿದ್ದಿಲ್ಲ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಮಗೂ ಒಡಂಬಡಿಕೆಯ ಪೆಟ್ಟಿಗೆಗೂ ಮೂರು ಸಾವಿರ ಅಡಿ ಅಂತರವಿರಲಿ. ಅದರ ಸಮೀಪ ನೀವು ಹೋಗಕೂಡದು. ಈ ದಾರಿಯಲ್ಲಿ ನೀವು ಹಿಂದೆಂದೂ ಪ್ರಯಾಣ ಮಾಡಿಲ್ಲ. ಆದರೆ ನೀವು ಅವರನ್ನು ಹಿಂಬಾಲಿಸಿದರೆ ಎಲ್ಲಿಗೆ ಹೋಗಬೇಕೆಂದು ನಿಮಗೆ ತಿಳಿಯುತ್ತದೆ” ಎಂದು ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರ ಇರಬೇಕು. ಅದರ ಹತ್ತಿರ ಬರಬೇಡಿರಿ. ನೀವು ಹೋಗಬೇಕಾದ ಮಾರ್ಗ ನಿಮಗೆ ತಿಳಿಯುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇದುವರೆಗೆ ಪ್ರಯಾಣ ಮಾಡಿರುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:4
12 ತಿಳಿವುಗಳ ಹೋಲಿಕೆ  

ಆತನು ಪರಿಶುದ್ಧರ ಸಭೆಯಲ್ಲಿ ಭಯಂಕರನಾದ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭೀಕರನು.


ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ; ಹಿಂದಿನ ದಿವಸಗಳಲ್ಲಿ ಅಂದರೆ ಸೌಲನ ಆಳಿಕೆಯಲ್ಲಿ ಇಸ್ರಾಯೇಲ್ಯರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ನಿನ್ನ ದೇವರಾದ ಯೆಹೋವನು - ನೀನು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನೂ ಪಾಲಕನೂ ಆಗಿರುವಿ ಎಂದು ಹೇಳಿದ್ದಾನಷ್ಟೆ ಅಂದರು.


ದೇವರು ಅವನಿಗೆ - ನೀನು ಹತ್ತಿರ ಬರಬೇಡ; ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂವಿು ಎಂದು ಹೇಳಿದನು.


ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಮೇರೆಯನ್ನು ಮಾಡಿಸಿ ಜನರಿಗೆ - ಎಚ್ಚರಿಕೆಯಾಗಿರ್ರಿ, ನೀವು ಈ ಬೆಟ್ಟವನ್ನು ಏರಲೂ ಕೂಡದು ಅದರ ಅಂಚನ್ನು ಮುಟ್ಟಲೂಕೂಡದು. ಮುಟ್ಟಿದವನಿಗೆ ಅಗತ್ಯವಾಗಿ ಪ್ರಾಣಶಿಕ್ಷೆಯಾಗಬೇಕು.


ಆದರೆ ಮೋಶೆ ಯೆಹೋವನಿಗೆ - ಸ್ವಾಮೀ, ನಾನು ಮೊದಲಿನಿಂದಲೂ ನೀನು ದಾಸನ ಸಂಗಡ ಮಾತಾಡಿದ ಮೇಲೆಯೂ ವಾಕ್ಚಾತುರ್ಯವಿಲ್ಲದವನು; ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಎಂದು ಹೇಳಲು ಯೆಹೋವನು ಅವನಿಗೆ -


ಇದಲ್ಲದೆ ಅವನು ಲಾಬಾನನ ಮುಖಭಾವವನ್ನು ನೋಡಿದಾಗ ಅದು ಮೊದಲಿದ್ದಂತೆ ತೋರಲಿಲ್ಲ.


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ; ಹೌದು, ರಾಜನಿಗೆ ಅಣಿಯಾಗಿದೆ; ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಿದ್ದಾನೆ; ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದೋಪಾದಿಯಲ್ಲಿ ಅದನ್ನು ಉರಿಸುವದು.


ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷ ಹೊತ್ತಿರುವದನ್ನು ಕಂಡಕೂಡಲೆ ನೀವೂ ನಿಮ್ಮ ಸ್ಥಳವನ್ನು ಬಿಟ್ಟು ಅದರ ಹಿಂದೆ ಹೋಗಿರಿ.


ಇದಲ್ಲದೆ ಯೆಹೋಶುವನು ಜನರಿಗೆ - ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು ಎಂದು ಹೇಳಿದನು.


ಯಾವನು ಯೆಹೋವನಲ್ಲಿ ಭಯಭಕ್ತಿಯುಳ್ಳವನೋ ಅವನಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು.


ನಿನ್ನ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಯಿಸುವವನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು