ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ಅಂದರೆ ನಿಮ್ಮ ಪಿತೃಗಳ ದೇವರಾದ ಯೆಹೋವನು ತಾನು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ದೇಶವನ್ನು ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವುಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರಿಸಬೇಕು.