Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:11 - ಕನ್ನಡ ಸತ್ಯವೇದವು J.V. (BSI)

11 ಜನರೆಲ್ಲಾ ಆಚೆಗೆ ಸೇರಿದ ಮೇಲೆ ಯಾಜಕರು ಯೆಹೋವನ ಮಂಜೂಷಸಹಿತವಾಗಿ ದಾಟಿ ಜನರ ಮುಂಗಡೆಯಲ್ಲಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಜನರು ಬೇಗನೆ ಹೊಳೆ ದಾಟಿದರು. ಅವರೆಲ್ಲರು ಆಚೆ ದಡ ಸೇರಿದ ಮೇಲೆ ಯಾಜಕರು ಯೆಹೋವನ ಮಂಜೂಷ ಸಹಿತವಾಗಿ ಹೊಳೆ ದಾಟಿ ಜನರ ಎದುರಿನಲ್ಲಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಜನರು ಬೇಗನೆ ನದಿ ದಾಟಿದರು. ಅವರೆಲ್ಲರು ಆಚೆಗೆ ಸೇರಿದ ಮೇಲೆ ಯಾಜಕರು ಸರ್ವೇಶ್ವರನ ಮಂಜೂಷದೊಡನೆ ನದಿ ದಾಟಿ ಜನರ ಮುಂದುಗಡೆಯೇ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜನರು ನದಿ ದಾಟಿದ ಮೇಲೆ ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಜನರ ಮುಂದಗಡೆಯಲ್ಲಿ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಜನರೆಲ್ಲರೂ ಆಚೆಗೆ ದಾಟಿದ ಮೇಲೆ ಯೆಹೋವ ದೇವರ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:11
7 ತಿಳಿವುಗಳ ಹೋಲಿಕೆ  

ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ಹೊಳೆಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು ಎಂದು ಹೇಳಿದನು.


ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನಿಂದ ಮೇಲೆ ಬಂದು ಒಣನೆಲದಲ್ಲಿ ತಮ್ಮ ಕಾಲುಗಳನ್ನಿಟ್ಟ ಕೂಡಲೆ ನೀರು ಮುಂಚಿನಂತೆ ಬಂದು ಯೊರ್ದನ್ ಹೊಳೆಯು ದಡಮೀರಿ ಹರಿಯಹತ್ತಿತು.


ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲಾ ಯೊರ್ದನಿನ ಆಚೆಗೆ ಸೇರಿದರು.


ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲಾ ಅವರು ನೆರವೇರಿಸುವವರೆಗೂ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲೇ ನಿಂತರು. ಜನರು ಬೇಗನೆ ಹೊಳೆದಾಟಿದರು.


ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು.


ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು, ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು.


ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ; ಯೆಹೋವನು ನಿಮಗೆ ಮುಂಬಲವಾಗಿ ಮುಂದರಿಯುವನು, ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು