Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:22 - ಕನ್ನಡ ಸತ್ಯವೇದವು J.V. (BSI)

22 ಇಸ್ರಾಯೇಲ್ಯರು ಒಣನೆಲವಾಗಿದ್ದ ಈ ಯೊರ್ದನನ್ನು ದಾಟಿ ಬಂದದ್ದಕ್ಕಾಗಿ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ‘ಇಸ್ರಾಯೇಲ್ಯರು ಒಣನೆಲವಾಗಿದ್ದ ಈ ಯೊರ್ದನನ್ನು ದಾಟಿ ಬಂದ್ದದರ ಗುರುತು’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ‘ಇಸ್ರಯೇಲರು ಒಣನೆಲವಾಗಿದ್ದ ಈ ಜೋರ್ಡನನ್ನು ದಾಟಿ ಬಂದುದಕ್ಕಾಗಿ’ ಎಂದು ಹೇಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ‘ಇಸ್ರೇಲಿನ ಜನರು ಜೋರ್ಡನ್ ನದಿಯನ್ನು ಒಣನೆಲದ ಮೇಲೆ ಹೇಗೆ ದಾಟಿದರು ಎಂಬುದನ್ನು ನಮ್ಮ ನೆನಪಿಗೆ ತರಲು ಈ ಕಲ್ಲುಗಳು ಸಹಾಯಕವಾಗಿವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀವು ಅವರಿಗೆ, ‘ಇಸ್ರಾಯೇಲರು ಒಣನೆಲದಲ್ಲಿ ಈ ಯೊರ್ದನ್ ನದಿಯನ್ನು ದಾಟಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:22
11 ತಿಳಿವುಗಳ ಹೋಲಿಕೆ  

ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲಾ ಯೊರ್ದನಿನ ಆಚೆಗೆ ಸೇರಿದರು.


ಸಮುದ್ರವನ್ನೂ ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತಜನರು ಹಾದುಹೋಗುವದಕ್ಕೆ ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದ ಬಾಹು ನೀನೇ ಹೌದು.


ಆರನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಎಂಬ ಮಹಾ ನದಿಯ ಮೇಲೆ ಹೊಯ್ಯಲು ಅದರ ನೀರು ಇಂಗಿಹೋಯಿತು; ಇದರಿಂದ ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಯಿತು.


ಜಲರಾಶಿಗೆ - ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು ಎಂದು ನಾನು ಅಪ್ಪಣೆಕೊಡುವವನಾಗಿದ್ದೇನೆ;


[ಈ ಜಯಗೀತಕ್ಕೆ ಕಾರಣವೇನಂದರೆ -] ಫರೋಹನ ಕುದುರೆಗಳೂ ರಥಗಳೂ ರಾಹುತರೂ ಸಮುದ್ರದಲ್ಲಿ ಹೊಕ್ಕು ನಡೆಯಲು ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರಮಾಡಿ ಮುಳುಗಿಸಿಬಿಟ್ಟನು; ಇಸ್ರಾಯೇಲ್ಯರಾದರೋ ಸಮುದ್ರದ ಮಧ್ಯದೊಳಗೆ ಒಣನೆಲದಲ್ಲಿ ನಡೆದುಹೋದರು.


ಇಸ್ರಾಯೇಲ್ಯರೋ ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು; ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.


ಇಸ್ರಾಯೇಲ್ಯರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತು.


ಮುಂದಣ ಕಾಲದಲ್ಲಿ ನಿಮ್ಮ ಮಕ್ಕಳು ಈ ಕಲ್ಲುಗಳನ್ನು ಯಾಕೆ ನಿಲ್ಲಿಸಿದ್ದಾರೆಂದು ನಿಮ್ಮನ್ನು ಕೇಳಿದರೆ ನೀವು ಅವರಿಗೆ -


ಮೇಲಣಿಂದ ಬರುವ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಣ ನೀರು ಅರಾಬಾ ತಗ್ಗಿನಲ್ಲಿರುವ ಲವಣ ಸಮುದ್ರಕ್ಕೆ ಹರಿದುಹೋಯಿತು. ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು